
ಬೆಂಗಳೂರು(ಜ. 05) ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಜರಾಜೇಶ್ವರಿ ದೇವಾಲಯ ಪಕ್ಕದಲ್ಲೇ ಅಗ್ನಿ ಅವಘಡ ಸಂಭವಿಸಿದ್ದು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನೂತನವಾಗಿ ನಿರ್ಮಾಣ ಆಗುತ್ತಿದ್ದ ಧ್ಯಾನ ಮಂದಿರದಲ್ಲಿ ಕಾಣಿಸಿಕೊಂಡ ಬೆಂಕಿ ಕಾಣಿಸಿಕೊಂಡಿತ್ತು. ರಾಜರಾಜೇಶ್ವರಿ ದೇವಾಲಯ ಪಕ್ಕದಲ್ಲಿ ನಿರ್ಮಾಣ ಆಗುತ್ತಿದ್ದ ಕಟ್ಟಡದಲ್ಲಿ ಅಗ್ನಿ ಕಾಣಿಸಿಕೊಂಡು ಆತಂಕ ಹೆಚ್ಚಿಸಿತ್ತು.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಒಂದು ಹಂತದಲ್ಲಿ ರಾಜರಾಜೇಶ್ವರಿ ದೇವಾಲಯದಲ್ಲಿಯೇ ಅಗ್ನಿ ಅವಘಡ ಸಂಭವಿಸಿದೆ ಎಂಬ ವರದಿಯಾಗಿತ್ತು. ನಂತರ ಪಕ್ಕದ ಧ್ಯಾನಮಂದಿರ ಎಂಬುದು ಗೊತ್ತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ