ಸ್ಯಾನಿಟೈಸರ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಹುಟ್ಟುಹಾಕಿದೆ ಹತ್ತಾರು ಪ್ರಶ್ನೆಗಳು

Suvarna News   | Asianet News
Published : Nov 11, 2020, 10:57 AM ISTUpdated : Nov 11, 2020, 03:12 PM IST
ಸ್ಯಾನಿಟೈಸರ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಹುಟ್ಟುಹಾಕಿದೆ ಹತ್ತಾರು ಪ್ರಶ್ನೆಗಳು

ಸಾರಾಂಶ

ರಾಸಾಯನಿಕ ತುಂಬಿದ ಬ್ಯಾರಲ್‌ಗಳನ್ನು ಅನ್‌ಲೋಡ್‌ ಮಾಡುವಾಗ ಅಗ್ನಿ ಅವಘಡ | ಕೆಲವೇ ಕ್ಷಣಗಳಲ್ಲಿ ಇಡೀ ಕಟ್ಟಡ ಆವರಿಸಿದ ಬೆಂಕಿ ಕೆನ್ನಾಲಿಗೆ | ದಟ್ಟಹೊಗೆ, ಬೆಂಕಿ ಕಂಡು ಸ್ಥಳೀಯರು ಕಂಗಾಲು | ಬೆಂಕಿ ನಂದಿಸಲು ಇಡೀ ದಿನ ಅಗ್ನಿಶಾಮಕದಳ ಹೋರಾಟ  

ಬೆಂಗಳೂರು (ನ. 11): ಸ್ಯಾನಿಟೈಸರ್‌ ಉತ್ಪಾದಿಸುವ ಖಾಸಗಿ ರಾಸಾಯನಿಕ ಕಾರ್ಖಾನೆಯೊಂದರ ಗೋದಾಮಿನಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಸುಟ್ಟು ಕರಕಲಾಗಿರುವ ಘಟನೆ ಮೈಸೂರು ರಸ್ತೆ ಸಮೀಪದ ಬಾಪೂಜಿ ನಗರದ ಮುಖ್ಯರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಬೆಂಕಿಗೆ ರಾಸಾಯನಿಕ ಕಾರ್ಖಾನೆ ಹಾಗೂ ಅದರ ಪಕ್ಕದ ಎರಡು ಅಂತಸ್ತಿನ ಕಟ್ಟಡಕ್ಕೆ ಹಾನಿಯಾಗಿದೆ. ಏಳು ವಾಹನಗಳು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿವೆ. ಓರ್ವ ಕಾರ್ಮಿಕನಿಗೆ ಗಾಯವಾಗಿದೆ.

ಎಷ್ಟೇ ನೀರು ಸುರಿದರೂ ಬೆಂಕಿ ಆರಲಿಲ್ಲ. ಈ ಹಂತದಲ್ಲಿ ಮೂವರು ಸಿಬ್ಬಂದಿ ನಿತ್ರಾಣರಾದರು. ಹೆಚ್ಚುವರಿ ಸಿಬ್ಬಂದಿ ಆಗಮಿಸಿ, ಕಾರ್ಯಾಚರಣೆ ಮುಂದುವರೆಸಿದರು. ಬೆಳಗ್ಗೆ 10 ರಿಂದ ರಾತ್ರಿ 8 ಗಂಟವರೆಗೆ ಸತತ 10 ತಾಸುಗಳು ಕಾರ್ಯಾಚರಣೆ ಬಳಿಕ ಬೆಂಕಿ ನಂದಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಂದಿನಂತೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಾಲ್ವರು ಕಾರ್ಮಿಕರು, ರಾಸಾಯನಿಕ ವಸ್ತುಗಳನ್ನು ಆನ್‌ಲೋಡ್‌ ಮಾಡುತ್ತಿದ್ದರು. ಆಗ ಬೆಂಕಿ ಕಿಡಿ ತಾಕಿ ರಾಸಾಯನಿಕ ತುಂಬಿದ್ದ ಪೆಟ್ಟಿಗೆಗಳು ಸ್ಫೋಟಗೊಂಡಿವೆ. ಇದರಿಂದ ಕ್ಷಣಾರ್ಧದಲ್ಲಿ ಕಟ್ಟಡವನ್ನು ಅಗ್ನಿ ಜ್ವಾಲೆ ಆವರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ