
(ವರದಿ : ಆಲ್ದೂರು ಕಿರಣ್, ಏಷ್ಯಾನೆಟ್ ಚಿಕ್ಕಮಗಳೂರು )
ಚಿಕ್ಕಮಗಳೂರು (ಫೆಬ್ರವರಿ 20, 2023) : ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ 30 ವರ್ಷದ ಪ್ರಕಾಶ್ ಹಾಗೂ 33 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ. ಇನ್ನು, ಈ ಪ್ರಕರಣ ಸಂಬಂಧ ಗುಂಡಿನ ದಾಳಿ ನಡೆಸಿರುವ ಆರೋಪಿ ರಮೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಮೃತಪಟ್ಟ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್‌ಗೆ ಬಂದೂಕು ಎಲ್ಲಿಂದ ಸಿಕ್ತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ: ಪ್ರೇಯಸಿ ಜತೆಗೆ ಓಡಿಹೋಗಿದ್ದ ವ್ಯಕ್ತಿ ನೇಣಿಗೆ ಶರಣು: ಪತ್ನಿ ತೊರೆದು ಪ್ರೇಯಸಿ ಹಿಂದೆ ಹೋಗಿದ್ದ ಭೂಪ..!
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಅಥವ ಯಾವ ಬಂದೂಕು ಪರವಾನಗಿ ಇದೆಯಾ ಎಂಬೆಲ್ಲಾ ದೃಷ್ಠಿಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಹಾಡಹಗಲೇ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ. ಗುಂಡಿನ ದಾಳಿ ನಡೆಸಿದ ರಮೇಶ್‌ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಗೆ, ಈ ಪ್ರಕರಣ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಬಾಳೆಹೊನ್ನೂರಿನ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಹಿಟ್ ಆ್ಯಂಡ್ ರನ್: ಹಿಂಬದಿಯಿಂದ ಬೈಕ್‌ಗೆ ಗುದ್ದಿದ ಬಿಎಂಟಿಸಿ ಬಸ್; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ