ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಫೈರಿಂಗ್‌

By Girish Goudar  |  First Published Nov 24, 2024, 9:13 PM IST

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. 
 


ಹುಬ್ಬಳ್ಳಿ(ನ.24):  ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ ಘಟನೆ ಇಂದು(ಭಾನುವಾರ) ನಡೆದಿದೆ. ಇಬ್ಬರು ಅಂತರಾಜ್ಯ ದರೋಡೆಕೋರರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು ಇಬ್ಬರು ಖದೀಮರ ಕಾಲಿಗೆ ಗುಂಡೇಟು ತಗುಲಿದೆ. 

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. 

Tap to resize

Latest Videos

ಕಾರ್ಕಳ: ಎಎನ್‌ಫ್-ನಕ್ಸಲರ ನಡುವೆ ಭೀಕರ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂಗೌಡನ ಹತ್ಯೆ!

ಮೂಲತಃ ಮಂಗಳೂರು ಮೂಲದ ಭರತ್, ಫಾರುಕ್ ಕಾರು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಇವರ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ರಾಹುಲ್ ಸುರ್ವೆ ಕಾರು ಅಡ್ಡಗಟ್ಟಿ ಖದೀಮರು ದರೋಡೆ ಮಾಡಿದ್ದರು. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರ ದರೋಡೆ ನಡೆದಿತ್ತು. 

ಕಾರು ಚಾಲಕನಿಗೆ ಬೆದರಿಕೆ ಹಾಕಿ ಫಾರೂಕ್ ಹಾಗೂ ಭರತ್ ಗ್ಯಾಂಗ್ ದರೋಡೆ ಮಾಡಿದ್ದರು. ನವೆಂಬರ್ 8 ರಂದು ದರೋಡೆ ನಡೆದಿತ್ತು. ಈ ಸಂಬಂಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.  15 ಜನರ ಗ್ಯಾಂಗ್‌ನಲ್ಲಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ಧಾರವಾಡ ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದರು. ಇಂದು ಸ್ಥಳ ಮಹಜರು ಮಾಡೋ ವೇಳೆ ಖದೀಮರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ. 

ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ. 

ನಟೋರಿಯಸ್ ಫಾರುಕ್ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ 17 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ರಾಜ್ಯ, ಹೊರ ರಾಜ್ಯದಲ್ಲೂ ಕೇಸ್‌ಗಳು ದಾಖಲಾಗಿವೆ. ಭರತ್ ಮೇಲೂ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೇಸ್‌ಗಳು ದಾಖಲಾಗಿವೆ. ಇವರ ಸಹಚರರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.  

ಮಂಗಳೂರು, ಬೆಂಗಳೂರು, ಕೇರಳ ಮೂಲದವರು ಈ ದರೋಡೆಯಲ್ಲಿ ಭಾಗಿಯಾಗಿರುವ ಶಂಕೆ ಇದೆ. ಆದಷ್ಟು ಬೇಗ ಉಳಿದ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. 

ಬೆಂಗಳೂರು: ಯುವಕನ ನಗ್ನಗೊಳಿಸಿ ಹಲ್ಲೆಗೈದವನಿಗೆ ಗುಂಡೇಟು..!

ಬೆಂಗಳೂರು: ದ್ವೇಷದ ಹಿನ್ನೆಲೆಯಲ್ಲಿ ಯುವಕನನ್ನು ನಗ್ನಗೊಳಿಸಿ ಹಲ್ಲೆಗೈದು ವಿಡಿಯೋ ಮಾಡಿದ್ದ ಪ್ರಕರಣ ಸಂಬಂಧ ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ ಮಾಡಿದ ರೌಡಿ ಶೀಟರ್ ಕಾಲಿಗೆ ಗೋವಿಂದರಾಜನಗರ ಠಾಣೆ ಇನ್‌ಸೆಕ್ಟರ್ ಕೆ.ಸುಬ್ರ ಮಣಿ ಸರ್ವಿಸ್ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾರೆ. ರಾಜಗೋಪಾಲನಗರ ಠಾಣೆ ರೌಡಿ ಶೀಟರ್ ಪವನ್ ಗೌಡ ಅಲಿಯಾಸ್ ಕಡುಬು(28) ಗುಂಡೇಟು ತಿಂದವನು.

ಕಲಬುರಗಿ: ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ, ದರೋಡೆಕೋರನ ಮೇಲೆ ಫೈರಿಂಗ್‌..!

ಗಾಯಗೊಂಡಿರುವ ರೌಡಿ ಪವನ್ ಹಾಗೂ ಕಾಮಾಕ್ಷಿಪಾಳ್ಯ ಠಾಣೆ ಹೆಡ್‌ಕಾನ್ಸ್‌ಟೇಬಲ್ ವೆಂಕಟೇಶ್ ಅವರನ್ನೂ ಚಿಕಿತ್ಸೆಗೆ ವಿಕ್ಟೋರಿಯಾ ಆಸತ್ರೆಗೆ ದಾಖಲಿಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಯುವಕನ ಮೇಲೆ ಹಲ್ಲೆ ಮಾಡಿದ್ದ: 

ರೌಡಿ ಪವನ್ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಘು ಎಂಬಾತನನ್ನು ಹುಡುಕಿಕೊಂಡು ಸೆ.15ರಂದು ರಾತ್ರಿ ಸುಮಾರು 8 ಗಂಟೆಗೆ ಸುಂಕದಕಟ್ಟೆಯ ಶ್ರೀನಿವಾಸನಗರಕ್ಕೆ ಬಂದಿದೆ. ರಘು ಸ್ನೇಹಿತ ವಿಶ್ವಾಸ ಎಂಬಾತನಿಗೆ ರಘು ಎಲ್ಲಿ ಎಂದು ಕೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಬಳಿಕ ಮಚ್ಚಿನಿಂದ ವಿಶ್ವಾಸ್ ಮೇಲೆ ಹಲ್ಲೆ ಮಾಡಿ, ರಘು ಸಿಕ್ಕರೆ ಹೇಳು. ಆತನನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿ ತೆರಳಿದ್ದ. ಈ ಸಂಬಂಧ ವಿಶ್ವಾಸ್ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದರು. 

click me!