
ಧಾರವಾಡ(ಮಾ.27): ನಗರದಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆಯನ್ನು ಬಯಲು ಮಾಡುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟಿನ ಸಿಸಿಬಿ ತಂಡ ಯಶಸ್ವಿಯಾಗಿದೆ.
ಧಾರವಾಡದ ಮಗದುಮ್ ಕಲ್ಯಾಣ ಮಂಟಪದ ಹಿಂಭಾಗದ ಸಿಬಿ ನಗರವೆಂದು ಕರೆಯಲ್ಪಡುವ ಚೆನ್ನಬಸವೇಶ್ವರ ನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆಯಲ್ಲಿ ನಾಲ್ಕು ಬೇರೆ ರಾಜ್ಯದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು, ನಾಲ್ವರು ಪುರುಷರು ಸೇರಿ ಐವರನ್ನು ಬಂಧಿಸಲಾಗಿದೆ.
ಕಾಮಾಠೀಪುರ : ವೇಶ್ಯೆಯರು ಹೊರಟಿದ್ದಾರೆ ಬಟ್ಟೆ, ತರಕಾರಿ, ಚಹಾ ಮಾರಾಟದತ್ತ!
ಶುಕ್ರವಾರ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸ್ ಇನ್ಸಪೆಕ್ಟರ್ ಭರತ ರೆಡ್ಡಿ, ಅಲ್ತಾಫ ಮುಲ್ಲಾ ತಂಡ ದಂಧೆಯನ್ನ ಬಯಲಿಗೇಳಿಯುವಲ್ಲಿ ಯಶಸ್ವಿಯಾಗಿದ್ದು, ರಕ್ಷಣೆ ಮಾಡಿದ ಯುವತಿಯರು ಹಾಗೂ ದಂಧೆಯಲ್ಲಿ ಭಾಗಿಯಾಗಿದ್ದ ಪಿಂಪ್ ಮತ್ತು ಪುರುಷರನ್ನು ಉಪನಗರ ಠಾಣೆಗೆ ಒಪ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ