ಚಂದಾಪುರದಲ್ಲಿ ಬಸ್ ಕಾರು ನಡುವೆ ಭೀಕರ ಅಪಘಾತ; ಐವರು ಸಾವು, ಹಲವರು ಗಂಭೀರ!

Published : Jun 04, 2023, 10:05 PM IST
ಚಂದಾಪುರದಲ್ಲಿ ಬಸ್ ಕಾರು ನಡುವೆ ಭೀಕರ ಅಪಘಾತ; ಐವರು ಸಾವು, ಹಲವರು ಗಂಭೀರ!

ಸಾರಾಂಶ

ಚಂದಾಪುರ ಜಿಲ್ಲೆಯಲ್ಲಿ ಬಸ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಗ್ಪುರ(ಜೂ.04): ಕಳೆದೆರಡು ತಿಂಗಳಿನಿಂದ ಅಪಘಾತಗಳು ಸಾವು ನೋವುಗಳು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ನಡೆದ ಸತತ ಅಪಘಾತ, ಇದೀಗ ಒಡಿಶಾದಲ್ಲಿ ನಡೆದ ರೈಲು ದುರಂತ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಮಹಾರಾಷ್ಟ್ರದ ಚಂದಾಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಲಾಗಿದೆ. 

ನಾಗ್ಪುರದಿಂದ ನಾಘಬಿದ್‌ಗೆ ತೆರಳುತ್ತಿದ್ದ ಕಾರು ಕನ್ಪಾ ಗ್ರಾಮದ ಬಳಿಕ ಅಪಘಾತಕ್ಕೀಡಾಗಿದೆ. ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅತೀ ವೇಗವಾಗಿ ಬರುತ್ತಿದ್ದ ಎರಡು ವಾಹನಗಳ ಮುಖಾಮುಖಿ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಇತರ ಇಬ್ಬರಲ್ಲಿ ಓರ್ವ ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟರೆ, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ.

ಮೈಸೂರು ಬೆನ್ನಲ್ಲೇ ಮತ್ತೊಂದು ಭೀಕರ ಅಪಘಾತ, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು!

ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಇತ್ತ ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರಕ್ಕೆ ಸ್ಥಳಾಂತರಿಸಲಾಗಿದೆ. 

 

 

ಇತ್ತೀಚೆಗೆ ಅಪಘಾತದ ಪ್ರಮಾಣ ಹೆಚ್ಚಾಗಿದೆ. ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಬೆಂಕಿಗಾಹುತಿಯಾಗಿದ್ದು ನವದಂಪತಿ ಸೇರಿ ನಾಲ್ಕು ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇತ್ತೀಚೆಗೆ ನಡೆದಿತ್ತು. ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಬುಧವಾರ ಮುಂಜಾನೆ ಮರಳುತ್ತಿದ್ದ ನಾಲ್ಕು ಜನರಿದ್ದ ಕಾರು ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಲ್ಲಿದ್ದ ಅಖಿಲೇಶ್‌, ಗೋಲು, ರಾಕೇಶ್‌ ಹಾಗೂ ಆತನ ಪತ್ನಿ ಶಿವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿವಷ್ಟರಲ್ಲಿ ಮೃತರಾಗಿದ್ದರು ಎಂದು ಪೊಲೀಸರು ತಿಳಿಸಿದರು.

ಟೈರ್‌ ಸ್ಪೋಟಗೊಂಡು ಲಾರಿಗೆ ಡಿಕ್ಕಿ ಹೊಡೆದ ಕಾರು: ಮಕ್ಕಳು ಸೇರಿ 6 ಮಂದಿ ಸಾವು

ಮೇ ತಿಂಗಳ ಅಂತ್ಯದಲ್ಲಿ ನಡೆದ ಅಪಘಾತದಲ್ಲಿ ನಟಿ ವೈಭವಿ ಉಪಾಧ್ಯಾಯ ಮೃತಪಟ್ಟಿದ್ದರು. ಜನಪ್ರಿಯ ಟೀವಿ ಕಾರ್ಯಕ್ರಮ ‘ಸಾರಾಭಾಯಿ ವರ್ಸಸ್‌ ಸಾರಾಭಾಯಿ ಟೇಕ್‌ 2’ ಖ್ಯಾತಿಯ ನಟಿ ವೈಭವಿ ಉಪಾಧ್ಯಾಯ (30) ಹಿಮಾಚಲ ಪ್ರದೇಶದ ಕುಲುನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದರು.

ಇಲ್ಲಿನ ಬಂಜಾರ್‌ ಪ್ರದೇಶದ ಸಿಧ್ವಾನ್‌ನಲ್ಲಿ ವೈಭವಿ ಇದ್ದ ಕಾರು ಕಡಿದಾದ ತಿರುವೊಂದರಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಪರಿಣಾಮ ಅಪಘಾತ ಸಂಭವಿಸಿದೆ. ಬಳಿಕ ತಲೆಗೆ ಪೆಟ್ಟು ಬಿದ್ದು ಗಾಯಗೊಂಡಿದ್ದ ನಟಿ ಕಾರಿನ ಕಿಟಕಿಯಿಂದ ಹೊರಹೋಗಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ವೇಳೆಗಾಗಲೇ ವೈಭವಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಸಣ್ಣಪುಟ್ಟಗಾಯಗಳಿಂದ ಕಾರು ಚಾಲಕ ಪಾರಾಗಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!