ಧೂಮ್ ಸ್ಟೈಲ್ ದರೋಡೆ: ಮೂವಿಂಗ್ ಲಾರಿಯನ್ನೇ ಚೇಸ್ ಮಾಡಿ 25 ಲಕ್ಷದ ಫ್ಲಿಪ್‌ಕಾರ್ಟ್ ಮಾಲು ಲೂಟಿ ಮಾಡಿದ ಖದೀಮರು!

Published : Feb 06, 2026, 05:25 PM IST
flipkart mobile theft Haveri highway moving truck robbery 25 lakh

ಸಾರಾಂಶ

ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಲಿಸುತ್ತಿದ್ದ ಫ್ಲಿಪ್‌ಕಾರ್ಟ್ ಲಾರಿಯಿಂದ ಸಿನಿಮೀಯ ಶೈಲಿಯಲ್ಲಿ ಕಳ್ಳತನ ನಡೆದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಬಳಿ, ಖದೀಮರು ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ದೋಚಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹಾವೇರಿ (ಫೆ.6): ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ಗೂಡ್ಸ್ ವಾಹನದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಸಿನಿಮೀಯ ಶೈಲಿಯಲ್ಲಿ ಕಳ್ಳತನ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ ಮೊಬೈಲ್ ಫೋನ್ ಸೇರಿದಂತೆ ವಿವಿಧ ಬೆಲೆಬಾಳುವ ವಸ್ತುಗಳನ್ನು ವಾಹನ ಚಲಿಸುತ್ತಿದ್ದ ಸಂದರ್ಭದಲ್ಲೇ ಖದೀಮರು ಲೂಟಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಕಾಕೋಳ ಗ್ರಾಮದಿಂದ ಮೊಟೇಬೆನ್ನೂರು ತಲುಪುವ ಅವಧಿಯಲ್ಲೇ ಈ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿದೆ.

25 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಮಾಯ

ಈ ದುರ್ಘಟನೆಯು ಬೆಂಗಳೂರಿನಿಂದ ಧಾರವಾಡ ಜಿಲ್ಲೆಯ ಕೊಟೂರ ಗ್ರಾಮದಲ್ಲಿರುವ ಫ್ಲಿಪ್‌ಕಾರ್ಟ್ ವೇರ್‌ಹೌಸ್‌ಗೆ ಲಾರಿ ಸಂಚರಿಸುತ್ತಿದ್ದ ವೇಳೆ ನಡೆದಿದೆ. ಮಲ್ಲಿಕಜಾನ್ ಮುಲ್ಲಾ ಎಂಬುವರಿಗೆ ಸೇರಿದ ಗೂಡ್ಸ್ ಲಾರಿಯಲ್ಲಿ ಈ ಕಳ್ಳತನ ನಡೆದಿದ್ದು, ಖದೀಮರು ವಾಹನದ 'ಲಿಂಕ್ಡ್ ಡಿವೈಸ್' ಅನ್ನು ಮುರಿದು ಹಾಕಿದ್ದಾರೆ. ಸುಮಾರು 6 ದೊಡ್ಡ ಬಾಕ್ಸ್‌ಗಳಲ್ಲಿದ್ದ 25 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿದ್ದಾರೆ. ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ..

ತನಿಖೆ ಚುರುಕುಗೊಳಿಸಿದ ಪೊಲೀಸರ

ಘಟನೆಗೆ ಸಂಬಂಧಿಸಿದಂತೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ರಾಷ್ಟ್ರೀಯ ಹೆದ್ದಾರಿ 48 ರ ಉದ್ದಕ್ಕೂ ಇರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಚಲಿಸುವ ಲಾರಿಯನ್ನು ಏರಿ ಕಳ್ಳತನ ಮಾಡಿರುವ ಈ ಶೈಲಿಯು ಪೊಲೀಸರಿಗೂ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ವಿವಿಧ ಆಯಾಮಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Online fraud : ಮದುವೆ ಜೊತೆ ಹಣ ಡಬಲ್ ಮಾಡುವ ಆಸೆ, ಚೆಂದದ ಹುಡುಗಿ ಮಾತು ಕೇಳಿದ್ದಕ್ಕೆ 6.35 ಲಕ್ಷ ಹರೋಹರ
ಡ್ರಗ್ಸ್ ದಾಳಿಯಲ್ಲಿ ಸಿಕ್ಕಿಬಿದ್ದ ಖ್ಯಾತ ನಟಿ ಅಂಜು ಕೃಷ್ಣ; ಸಿನಿಲೋಕದಲ್ಲಿ ಬಹುದೊಡ್ಡ ಜಾಲ ಪತ್ತೆ ಆಯ್ತಾ?