ಪರೀಕ್ಷೆ ವೇಳೆ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ: ಮನನೊಂದು ಬೆಂಕಿ ಹಚ್ಚಿಕೊಂಡ ಬಾಲಕಿ

Published : Oct 15, 2022, 03:36 PM IST
ಪರೀಕ್ಷೆ ವೇಳೆ ಬಲವಂತವಾಗಿ ಬಟ್ಟೆ ಬಿಚ್ಚಿಸಿದ  ಶಿಕ್ಷಕಿ: ಮನನೊಂದು ಬೆಂಕಿ ಹಚ್ಚಿಕೊಂಡ ಬಾಲಕಿ

ಸಾರಾಂಶ

Crime News: ಪರೀಕ್ಷೆ ವೇಳೆ ಅನುಮಾನದಿಂದ ಶಿಕ್ಷಕಿ ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಕ್ಕಾಗಿ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ನಡೆದಿದೆ

ಜಾರ್ಖಂಡ್ (ಅ. 15): ಪರೀಕ್ಷೆ ವೇಳೆ ಅನುಮಾನದಿಂದ ಶಿಕ್ಷಕಿ ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಕ್ಕಾಗಿ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ನಡೆದಿದೆ. ಘಟನೆಯ ನಂತರ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ಅಪ್ರಾಪ್ತ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.  ಶಿಕ್ಷಕಿ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾಥಿನಿ ತನ್ನ ಸಮವಸ್ತ್ರದಲ್ಲಿ ಪೇಪರ್ ಚೀಟಿಗಳನ್ನು ಕೊಂಡೊಯ್ದಿದ್ದಾಳೆ ಎಂದು ಶಿಕ್ಷಕಿ ಶಂಕಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾಳೆ ಎಂದು ಶಂಕಿಸಿ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ್ದಾಳೆ ಎನ್ನಲಾಗಿದೆ.  

ಶಿಕ್ಷಕಿಯು ಆಕೆಯನ್ನು ಅವಮಾನಿಸಿದ್ದು ಸಮವಸ್ತ್ರದಲ್ಲಿ ಚೀಟಿಗಳನ್ನು ಬಚ್ಚಿಟ್ಟಿದ್ದಾಳೆಯೇ ಎಂದು ಪರೀಕ್ಷಿಸಲು ತರಗತಿಯ ಪಕ್ಕದ ಕೋಣೆಯಲ್ಲಿ ಆಕೆಯ ಬಟ್ಟೆಗಳನ್ನು ತೆಗೆಯುವಂತೆ ಮಾಡಿದ್ದಾಳೆ ಎಂದು ವಿದ್ಯಾರ್ಥಿನಿ ಹೇಳಿಕೆಯಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.  ಅಪ್ರಾಪ್ತ ಬಾಲಕಿ ಶಾಲೆಯಿಂದ ಬಂದ ಸ್ವಲ್ಪ ಸಮಯದ ನಂತರ ಅವಮಾನವನ್ನು ಸಹಿಸಲಾರದೆ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಸಂತ್ರಸ್ತೆಯ ತಾಯಿ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಮೈಸೂರು:  ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ:  ಆನಾರೋಗ್ಯ ಮತ್ತು ಕೌಟುಂಬಿಕ ಸಮಸ್ಯೆಯಿಂದ ಮನನೊಂದ ಕೆಎಂಎಫ್‌ ನಿವೃತ್ತ ಅಧಿಕಾರಿಯೊಬ್ಬರು ಕಾರಿನಲ್ಲಿಯೇ ಕುಳಿತುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕೆಎಂಎಫ್‌ ನಿವೃತ್ತ ಅಧಿಕಾರಿ ಶಿವಣ್ಣ (61) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಮಂಗಳೂರಿನ ಕೆಎಂಎಫ್‌ನಲ್ಲಿ ಅಧಿಕಾರಿಯಾಗಿದ್ದು, 5 ವರ್ಷಗಳ ಹಿಂದೆ ಸ್ವಯಂ ನಿವೃತ್ತಿಯನ್ನು ಪಡೆದಿದ್ದರು. ಸುಮಾರು 3- 4 ವರ್ಷದಿಂದ ಪತ್ನಿ ಮತ್ತು ಮಗಳಿಂದ ದೂರವಿದ್ದರು. ಮೈಸೂರಿನ ಬಾಪೂಜಿನಗರದ ಹರಿ ವಿದ್ಯಾಲಯದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ದೆಹಲಿ: 11ರ ಬಾಲಕನಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕೇಸಲ್ಲಿ ಮದರಸಾ ಶಿಕ್ಷಕ ಅರೆಸ್ಟ್‌

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶಿವಣ್ಣ ಅವರು ಮಹಿಳೆಯೊಬ್ಬರನ್ನು ಕೇರ್‌ ಟೇಕರ್‌ ಆಗಿ ಇರಿಸಿಕೊಂಡಿದ್ದರು. ಕಳೆದ ವಾರ ಮಂಗಳೂರಿನಲ್ಲಿ ಆಸ್ಪತ್ರೆಯೊಂದರಲ್ಲಿ ಆರೋಗ್ಯ ಪರೀಕ್ಷೆ ಮಾಡಿಸಿದಾಗ ಕಿಡ್ನಿ ಸಮಸ್ಯೆ ಇರುವುದು ತಿಳಿದಿದೆ. ಈ ಎಲ್ಲಾ ಕಾರಣದಿಂದ ಮನನೊಂದ ಶಿವಣ್ಣ ಅವರು, ಶುಕ್ರವಾರ ಮಧ್ಯಾಹ್ನ ಮನೆಯಿಂದ ಅರ್ಧ ಕಿ.ಮೀ ದೂರಕ್ಕೆ ತಮ್ಮ ಕಾರಿನಲ್ಲಿ ಬಂದು ಹರಿ ವಿದ್ಯಾಲಯದ ಹಿಂಭಾಗದಲ್ಲಿ ಕಾರಿನ ಡ್ರೈವರ್‌ ಸೀಟಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡಿದ್ದಾರೆ.

ಕಾರು ಹೊತ್ತಿ ಉರಿಯುತ್ತಿರುವುದನ್ನು ಕಂಡು ಸಾರ್ವಜನಿಕರು ಸರಸ್ವತಿಪುರಂ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದ ಜತೆಗೆ ಪೊಲೀಸರು ಸ್ಥಳಕ್ಕೆ ದಾವಿಸುವ ವೇಳೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ಸಂಬಂಧ ಸರಸ್ವತಿಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು