ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತಕ್ಕೀಡಾಗಿದೆ. ಕಾರಿಗೆ ಅಡ್ಡ ಬಂದ ಬೈಕ್ ಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ಡಿಸಿಎಂ ಸವದಿ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕೋಡಿ (ಆ.31) : ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತಕ್ಕೀಡಾಗಿದೆ. ಕಾರಿಗೆ ಅಡ್ಡ ಬಂದ ಬೈಕ್ ಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ಡಿಸಿಎಂ ಸವದಿ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡ್ಯೂಟಿ ಮುಗಿಸಿಕೊಂಡು ಮನೆಗೆ ಹೋಗಿದ್ದೇ ತಪ್ಪಾಯ್ತ!
ರಾಯಭಾಗ ತಾಲೂಕಿನ ಹಾರೂಗೇರಿ ಬಳಿ ಬೆಳಗಾವಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಸಂಭವಿಸಿದ ಅಪಘಾತ. ಕಾರು ಪಲ್ಟಿ ಹೊಡೆಯುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ದಾವಿಸಿದ್ದಾರೆ. ಕಾರಿನಲ್ಲಿದ್ದ ಲಕ್ಷ್ಮಣ್ ಸವದಿ(Laxman Savadi), ಗನ್ ಮ್ಯಾನ್, ಕಾರು ಚಾಲಕನನ್ನು ಗಾಜು ಒಡೆದು ಹೊರಕ್ಕೆ ತೆಗೆದಿದ್ದಾರೆ. ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ರಸ್ತೆಯಾಚೆ ಪಲ್ಟಿ ಹೊಡೆದಿದೆ. ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ನಡೆದಿದೆ.
Ballari Accident: ಪೊಲೀಸರ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು?
ಲಕ್ಷ್ಮಣ್ ಸವದಿ ಕುಟುಂಬದ ಗ್ರಹಗತಿ ಸರಿ ಇಲ್ವಾ?
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕುಟುಂಬದ ಗ್ರಹಗತಿ ಸರಿಯಿದ್ದಂತಿಲ್ಲ ಎಂದು ಸ್ಥಳೀಯರು ಸಂದೇಹ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಕಳೆದ ವರ್ಷ ಹೆಚ್ಚು ಕಮ್ಮಿ ಇದೇ ಸಮಯಕ್ಕೆ ಮಾಜಿ ಸಚಿವ ಡಿಸಿಎಂ ಪುತ್ರ ನ ಕಾರು ಬೈಕ್ ಡಿಕ್ಕಿ ಹೊಡೆದಿತ್ತು. ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣ ಹತ್ತಿರ ಕೂಡಲಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಅಪಘಾತ ನಡೆದಿತ್ತು. ಅಪಘಾತದಲ್ಲಿ 38 ವರ್ಷದ ರೈತ ಮೃತಪಟ್ಟಿದ್ದ. ಈ ಘಟನೆಯಿಂದ ಲಕ್ಷ್ಮಣ್ ಸವದಿಗೆ ಬಹಳ ಕಿರಿಕಿರಿಯಾಗಿತ್ತು. ವಿರೋಧ ಪಕ್ಷಗಳು ಮುಗಿಬಿದ್ದು ಟೀಕಿಸಿದ್ದವು. ಡಿಸಿಎಂ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದವು. ಇದೀಗ ಸರಿಯಾಗಿ ಇದೇ ಸಮಯಕ್ಕೆ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವುದು ಹೀಗೊಂದು ಅನುಮಾನ ಮೂಡುವಂತಾಗಿದೆ.