Latest Videos

ವಾಲ್ಮೀಕಿ ನಿಗಮದ ಹಗರಣ ಆರೋಪಿಗೆ ಜೀವ ಬೆದರಿಕೆ ಹಾಕಿದ ಮಾಜಿ ಸಚಿವ ನಾಗೇಂದ್ರನ ಆಪ್ತರು

By Sathish Kumar KHFirst Published Jun 26, 2024, 5:12 PM IST
Highlights

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣದ ಆರೋಪಿ ತಮಗೆ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತರು ಜೀವ ಬೆದರಿಕೆ ಹಾಕಿದ್ದಾರೆ ಎಂದು  ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು (ಜೂ.26): ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಮುಖಭಂಗ ಉಂಟುಮಾಡಿದ ಪ್ರಕರಣ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣದ ಆರೋಪಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಿದಾಗ ತಮಗೆ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತರಿಂದ ಜೀವ ಬೆದರಿಕೆ ಹಾಕಲಾಗಿದೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಹೌದು, ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ ಆರೋಪಿ ಸತ್ಯನಾರಾಯಣ ವರ್ಮಾ ತನಗೆ, ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತರಿಂದ ಜೀವ ಬೆದರಿಕೆ ಹಾಕಲಾಗಿದೆ ಎಂದು ಅವಲತ್ತುಕೊಂಡಿದ್ದಾರೆ. ಬುಧವಾರ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಆರೋಪಿ ಸತ್ಯನಾರಾಯಣ ವರ್ಮಾ ಗಂಭೀರ ಆರೋಪ‌ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಹಗರಣದ ಪ್ರಕರಣದಲ್ಲಿ ಸತ್ಯನಾರಾಯಣವರ್ಮಾ 13ನೇ ಆರೋಪಿಯಾಗಿದ್ದಾರೆ.

ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣ: ಕೊನೆಗೂ ರಾಜೀನಾಮೆ ಕೊಟ್ಟ ಸಚಿವ ಬಿ. ನಾಗೇಂದ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪಿಗಳಾದ ಸತ್ಯಾನಾರಯಣ ವರ್ಮ ಸೇರಿ‌ ಮೂವರು ಆರೋಪಿಗಳನ್ನ ಬುಧವಾರ 3ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಸಲಾಗಿತ್ತು. ಆ ವೇಳೆ ತನಗೆ ಜೀವ ಬೆದರಿಕೆ ಇರೋದಾಗಿ ಅಳಲು ತೋಡಿಕೊಂಡಿದ್ದಾರೆ. ಬಂಧನಕ್ಕೂ ಮುನ್ನ  ಸತ್ಯನಾರಾಯಣ ವರ್ಮಾ ಮನೆಗೆ ಮಾಜಿ ಸಚಿವ ಬಿ. ನಾಗೇಂದ್ರನ ಸಹಚರರು ಬಂದು ಇಡೀ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನು ಕಸ್ಟಡಿಯಲ್ಲಿದ್ದ ವೇಳೆ ನಾಗೇಂದ್ರ ಅವರ ಪಿಎ ನೆಕ್ಕುಂಡಿ ನಾಗರಾಜ್ ಆಪ್ತರಿಂದ ಹಲ್ಲೆ ಮಾಡಲು ಯತ್ನಿಸಲಾಗಿದೆ ಎಂದು ಹೇಳಿದ್ದಾರೆ. 

ಇನ್ನು ಕೋರ್ಟ್ ನಿಂದ ಹೊರಗೆ ಕರೆದೊಯ್ಯುವ ವೇಳೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಇನ್ನು ಆರೋಪಿ ಹೇಳಿಕೆಯನ್ನ ದಾಖಲು ಮಾಡಿಕೊಂಡ ನ್ಯಾಯಾಧೀಶರು, ಹಲ್ಲೆ ಯತ್ನ ಆರೋಪ ಸಂಬಂದ ತನಿಖೆ ಮಾಡುವಂತೆ ಹಲಸೂರುಗೇಟ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

click me!