
ಮಂಡ್ಯ(ಮಾ.04): ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರ ಸಹೋದರ ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ.
ಕೆ.ಬಿ.ಚಂದ್ರಶೇಖರ್ ಅವರ ಸಹೋದರನಾಗಿರುವ ಕೆ.ಬಿ.ರವಿಯನ್ನ ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ ಮಹಿಳೆಯ ಕುಟುಂಬಸ್ಥರು. ರವಿಯ ಕಮರ್ಷಿಯಲ್ ಬಿಲ್ಡಿಂಗ್‌ನಲ್ಲಿ ಮಹಿಳೆ ಬ್ಯೂಟಿ ಪಾರ್ಲರ್ ಇಟ್ಟುಕೊಂಡಿದ್ದಳು. ಇದೇ ಮಹಿಳೆಯೊಂದಿಗೆ ಕೆ.ಬಿ.ರವಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಅಂತ ಆರೋಪಿಸಲಾಗಿದೆ.
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಸೇರಿ ತನ್ನಿಬ್ಬರು ಮಕ್ಕಳಿಗೂ ಬೆಂಕಿ ಹಚ್ಚಿ ಕೊಂದ ಪತಿ
ಈ ಮಹಿಳೆ ಗಂಡನಿಗೆ ಪದೇ ಪದೇ ಡೈವೊರ್ಸ್ ಕೊಡುವಂತೆ ಒತ್ತಾಯಿಸಿ ಕಳೆದ ತಿಂಗಳು ಡಿವೋರ್ಸ್ ಅರ್ಜಿ ಹಾಕಿದ್ದಳಂತೆ. ಕೆ.ಬಿ.ರವಿ ಮನೆಯಲ್ಲಿ ಯಾರು ಇಲ್ಲದ ಹಿನ್ನಲೆಯಲ್ಲಿ ವಿವಾಹಿತ ಮಹಿಳೆ ನಿನ್ನೆ(ಶುಕ್ರವಾರ) ರಾತ್ರಿ ರವಿ ಮನೆಗೆ ಸೇರಿದ್ದಳು. ರಾತ್ರಿ ಮನೆಗೆ ಬಾರದ ಹಿನ್ನಲೆ ಮಹಿಳೆ ಕುಟುಂಬಸ್ಥರು ಮಾಜಿ ಶಾಸಕ ರವಿ ಮನೆಗೆ ಬಂದಿದ್ದರು. ಈ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ ಮಹಿಳೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ