ಗುಂಡು ಹಾರಿಸಿಕೊಂಡು ಮಾಜಿ ಯೋಧ ಆತ್ಮಹತ್ಯೆ

Published : Mar 13, 2021, 07:56 AM IST
ಗುಂಡು ಹಾರಿಸಿಕೊಂಡು ಮಾಜಿ ಯೋಧ ಆತ್ಮಹತ್ಯೆ

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಕಮಲಾಕರ್‌| ಕೆಲ ವರ್ಷಗಳಿಂದ ಪತ್ನಿ ಶಿಲ್ಪಾ ಹಾಗೂ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಕಮಲಾಕರ್‌| ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಕಮಲಾಕರ್‌ ವಿವಾಹವಾದ ಬಳಿಕ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಖಾಸಗಿ ಕಂಪನಿಯಲ್ಲಿ ಗನ್‌ಮ್ಯಾನ್‌ ಆಗಿ ಕೆಲಸಕ್ಕೆ ಸೇರಿದ್ದ ಮೃತ ಕಮಲಾಕರ್| 

ಬೆಂಗಳೂರು(ಮಾ.13): ಖಾಸಗಿ ಕಂಪನಿ ಉದ್ಯೋಗಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಬಸವೇಶ್ವರ ನಗರದ ಪಟ್ಟಲ್ಲಮ್ಮ ದೇವಸ್ಥಾನ ಸಮೀಪದ ನಿವಾಸಿ ಕಮಲಾಕರ್‌ ಮಡಿವಾಳ (29) ಮೃತ ವ್ಯಕ್ತಿ. ಕಮಲಾಕರ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನರಾಗಿದ್ದಾರೆ. ಕೆಲ ವರ್ಷಗಳಿಂದ ಪತ್ನಿ ಶಿಲ್ಪಾ ಹಾಗೂ ಮೂರು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು.

ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಕಮಲಾಕರ್‌ ವಿವಾಹವಾದ ಬಳಿಕ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಖಾಸಗಿ ಕಂಪನಿಯಲ್ಲಿ ಗನ್‌ಮ್ಯಾನ್‌ ಆಗಿ ಕೆಲಸಕ್ಕೆ ಸೇರಿದ್ದರು. ಶುಕ್ರವಾರ ಬೆಳಗ್ಗೆ 8.30ರ ಸುಮಾರಿಗೆ ಎಂದಿನಂತೆ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮನೆಗೆ ವಾಪಸ್‌ ಆಗಿದ್ದರು. ರೂಮ್‌ಗೆ ತೆರಳಿದ್ದ ಕಮಲಾಕರ್‌ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋರು ಶಬ್ದ ಕೇಳಿ ಶಿಲ್ಪಾ ಕೂಡಲೇ ರೂಮ್‌ಗೆ ಹೋಗಿದ್ದು, ಅಷ್ಟೊತ್ತಿಗೆ ಕಮಲಾಕರ್‌ ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಕಲಬುರಗಿ: ಮಗನೊಂದಿಗೆ ತಾಯಿ ನೇಣಿಗೆ ಶರಣು

ಯಾವುದೇ ಕೌಟುಂಬಿಕ ಕಲಹ ಇರಲಿಲ್ಲ. ಪತಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಒತ್ತಡದಲ್ಲಿದ್ದರು ಎಂದು ಪತ್ನಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!