ಜಿಪಂ ಮಾಜಿ ಅಧ್ಯಕ್ಷ ವೈರಮುಡಿ ಪುತ್ರ ಅನೀಶ್ ಎಡಗೈ ತುಂಡಾಗಿದೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಗಾಯಗೊಂಡ ಅನೀಶ್ ಹಾಗೂ ಇತರರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕನಕಪುರ(ಜು.23): ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ರಾಮನಗರ ಜಿಲ್ಲೆಯ ಕನಕಪುರದ ಮಳಗಾಳು ಬಡಾವಣೆಯಲ್ಲಿ ನಡೆದಿದೆ. ಗಲಾಟೆಯಲ್ಲಿ ಓರ್ವ ಯುವಕನ ಮುಂಗೈ ಕಟ್ ಆಗಿದ್ದು, ಕೆಲವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಜಿಪಂ ಮಾಜಿ ಅಧ್ಯಕ್ಷ ವೈರಮುಡಿ ಪುತ್ರ ಅನೀಶ್ ಎಡಗೈ ತುಂಡಾಗಿದೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಗಾಯಗೊಂಡ ಅನೀಶ್ ಹಾಗೂ ಇತರರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಮೀನು ವಿಚಾರ.. ಎರಡು ಕುಟುಂಬಗಳ ಮಧ್ಯೆ ಪೊಲೀಸರ ಎದುರೇ ಸಿನಿಮೀಯ ಶೈಲಿಯಲ್ಲಿ ಮಾರಾಮಾರಿ!
ಯುವಕರ ಗುಂಪೊಂದು ಅನೀಶ್ ಮನೆ ಬಳಿ ತೆರಳಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಗಲಾಟೆಯಲ್ಲಿ ಏಳು ಮಂದಿಗೆ ಗಾಯಗಳಾಗಿವೆ. ಹಳೆ ವೈಶಮ್ಯಕ್ಕೆ ಆಗಾಗ್ಗೆ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹರ್ಷ, ಕರುಣೇಶ್ ಸೇರಿದಂತೆ 6 ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಕನಕಪುರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.