
ಮಂಗಳೂರು(ಜೂ.15): ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮಾದಕ ವಸ್ತುವನ್ನು ಬೆಂಗಳೂರಿನಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಪೂಲೀಸರಿಗೆ ಖಚಿತ ಮಾಹಿತಿ ಬಂದಿತ್ತು.
ಕಾಸರಗೋಡು ಉಪ್ಪಳ ನಿವಾಸಿ ಮಹಮ್ಮದ್ ರಮೀಝ್(24), ಶಿರಿಯಾ ನಿವಾಸಿ ಮೊಹಿದ್ದೀನ್ ರಾಶೀದ್ (24), ಉಪ್ಪಳ ನಿವಾಸಿ ಅಬ್ದುಲ್ ರವೂಫ್ (35) ಮತ್ತು ಬೆಂಗಳೂರು ಮಡಿವಾಳ ನಿವಾಸಿ ಸಬಿತಾ ಚಿಂಚು ಸಮೀರಾ (25) ಬಂಧಿತರು. ಅವರಿಂದ ಒಟ್ಟು 125 ಗ್ರಾಂ ತೂಕದ 6 ಲಕ್ಷ ರು. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 6 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪನ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 9.82 ಲಕ್ಷ ರು. ಎಂದು ಅಂದಾಜಿಸಲಾಗಿದೆ.
ಚಿಕ್ಕಬಳ್ಳಾಪುರ: ಜೆಡಿಎಸ್ ಕಾರ್ಯಕರ್ತನದ್ದು ಆಕ್ಸಿಡೆಂಟ್ ಅಲ್ಲ ಕೊಲೆ..!
ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ಐ ಪ್ರದೀಪ್ ಟಿ.ಆರ್. ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ಪಡೀಲ್ ಬಳಿ ಕಾರನ್ನು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ