ಮನೆಯಿಂದ ಹೊರಹೋದ ಮಕ್ಕಳು ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ.
ತುಮಕೂರು (ಮೇ.22) : ಮನೆಯಿಂದ ಹೊರಹೋದ ಮಕ್ಕಳು ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ.
ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು. ಎಲ್ಲರೂ 15 ವರ್ಷದ ವಯಸ್ಸಿನವರು. ಶನಿವಾರ ಮಧ್ಯಾಹ್ನದ ವೇಳೆ ನಾಲ್ವರು ಮನೆಯಿಂದ ಹೊರಗಡೆ ಹೋಗಿದ್ದಾರೆ. ಸಂಜೆಯಾದರೂ ಮನೆಗೆ ವಾಪಸ್ ಆಗಿಲ್ಲ. ಪೋಷಕರು ಆತಂಕಗೊಂಡು ಎಲ್ಲ ಕಡೆಯೂ ಹುಡುಕಾಡಿದ್ದಾರೆ ಆದರೂ ಮಕ್ಕಳು ಪತ್ತೆಯಾಗದೆ ನಿಗೂಢವಾಗಿ ಕಣ್ಮರೆಯಾಗಿರುವುದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.
ಮಕ್ಕಳನ್ನು ಸಾಕಷ್ಟು ಕಡೆ ಹುಡುಕಾಡಿದ್ದಾರೆ, ಪತ್ತೆಯಾಗದ ಹಿನ್ನೆಲೆ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು. ನೀಡಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.
ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ
ತುಮಕೂರು: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಯಲ್ಲಾಪುರದಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಕೊಲೆಯಾದ ವ್ಯಕ್ತಿ. ತುಮಕೂರು ಹೊರಹೊಲಯದಲ್ಲಿರುವ ಯಲ್ಲಾಪುರದ ಅಂಗಡಿಯಲ್ಲಿ ಘಟನೆ ಸಂಭವಿಸಿದ್ದು, ಇಬ್ಬರು ಮಕ್ಕಳೊಂದಿಗೆ ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದ ಜಾಕೀರ್ ನೂತನ ಟೈಲ್ಸ್‌ನ ಅಂಗಡಿಯನ್ನು 2 ತಿಂಗಳ ಹಿಂದೆ ಯಲ್ಲಾಪುರದಲ್ಲಿ ತೆರೆದಿದ್ದರು. ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು ಜಾಕೀರ್ ಸಹಾಯಕ ಖಾದರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
.ಕುರಿಗಳ ಮೇಲೆ ನಾಯಿಗಳ ದಾಳಿ: 10 ಕುರಿ ಸಾವು
ಶಿರಾ: ಕುರಿ ರೊಪ್ಪದ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ 10 ಕುರಿಗಳು ಸಾವನ್ನಪ್ಪಿ, 8 ಕುರಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ತಾಲೂಕಿನ ಗೌಡಗೆರೆ ಹೋಬಳಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಬ್ರಹ್ಮಸಂದ್ರ ಗ್ರಾಮದ ಚಿಕ್ಕ ತಿಮ್ಮಣ್ಣ ಎಂಬುವವರಿಗೆ ಸೇರಿದ ಕುರಿ ರೊಪ್ಪದ ಮೇಲೆ ರಾತ್ರಿ ಮಳೆ ಬರುತ್ತಿದ್ದ ಕಾರಣ ನಾಯಿಗಳು ಕುರಿಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಕುರಿಗಳ ಕಿರಿಚಾಟದ ಶಬ್ದ ಕೇಳಿಸಿಲ್ಲ. ಬೆಳಗ್ಗೆ ಎದ್ದು ನೋಡಿದಾಗ ಘಟನೆ ನಡೆದಿರುವ ಬಗ್ಗೆ ತಿಳಿದಿದೆ. ಕುರಿಗಳಿಂದನೆ ಜೀವನ ಕಟ್ಟಿಕೊಂಡಿರುವ ಚಿಕ್ಕ ತಿಮ್ಮಣ್ಣ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.