ದೇವರ ದರ್ಶನ ಪಡೆದು ಮನೆಗೆ ತೆರಳುವ ವೇಳೆಯಲ್ಲಿ ವಿಧಿ ತನ್ನ ಅಟ್ಟಹಾಸ ಮೆರೆದಿದೆ. ಕ್ರೂರ ವಿಧಿಯಾಟಕ್ಕೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟು 12ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಯೆ ಪಡೆಯುತ್ತಿದ್ದಾರೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಮೇ.24): ದೇವರ ದರ್ಶನ ಪಡೆದು ಮನೆಗೆ ತೆರಳುವ ವೇಳೆಯಲ್ಲಿ ವಿಧಿ ತನ್ನ ಅಟ್ಟಹಾಸ ಮೆರೆದಿದೆ. ಕ್ರೂರ ವಿಧಿಯಾಟಕ್ಕೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟು 12ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಯೆ ಪಡೆಯುತ್ತಿದ್ದಾರೆ. ಹೌದು! ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಮತ್ತು ಕೊಟ್ಟಿಗೆಹಾರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಸ್ಕಾಂ ಲಾರಿಗೆ ಓಮ್ನಿ ಮತ್ತು ಆಲ್ಟೋ ಕಾರುಗಳು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತ: ರಾಷ್ಟ್ರೀಯ ಹೆದ್ದಾರಿಯಾಗಿರುವ ಮೂಡಿಗೆರೆ ಮಂಗಳೂರು ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದೆ. ಇಂದು ಸಂಜೆ ಸುಮಾರು ನಾಲ್ಕು ಗಂಟೆ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಓಮ್ನಿ ಮತ್ತು ಆಲ್ಟೋ ಕಾರುಗಳು ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಒಂದೇ ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಮೃತರೆಲ್ಲರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಕೂಕಿನ ಚಿಕ್ಕಜಾಜೂರುಅಂಚೆ ಚನ್ನಪಟ್ಟಣ ಗ್ರಾಮದವರಾಗಿದ್ದಾರೆ. ಒಂದೇ ಕುಟುಂಬದ ಸದಸ್ಯರು ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಾಸಾಗುತ್ತಿದ್ದರು ಎನ್ನಲಾಗುತ್ತಿದೆ.
ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸುತ್ತಿದೆ ಕಾಂಗ್ರೆಸ್: ಶಾಸಕ ಸಿ.ಸಿ.ಪಾಟೀಲ್ ಲೇವಡಿ
ಓವರ್ ಟೇಕ್ ಮಾಡುವಾಗ ನಡೆದ ಅಪಘಾತ: ಕೊಟ್ಟಿಗೆಹಾರ ದಾಟಿ ಸ್ವಲ್ಪ ದೂರ ಬಂದಾಗ ವಾಹನವೊಂದನ್ನು ಓವರ್ ಟೇಕ್ ಮಾಡಿ ಸಾಗುವಾಗ ಎದುರಿನಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಓಮಿನಿ ಡಿಕ್ಕಿ ಹೊಡೆದಿದ್ದು, ಹಿಂದಿನಿಂದ ಬರುತ್ತಿದ್ದ ಅದೇ ಕುಟುಂಬದ ಆಲ್ಟೋ ಕಾರ್ ಓಮಿನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ನಜ್ಜುಗುಜ್ಜಾಗಿದ್ದು ಓಮ್ನಿಯಲ್ಲಿದ್ದ ಮೂವರು ಪುರುಷರು ಮತ್ತು ಓರ್ವ ಮಹಿಳೆ ಮೃತಪಟ್ಟಿದ್ದು ಇತರೆ ನಾಲ್ವರು ಗಂಭೀರ ಗಾಯಗೊಂಡಿದ್ದಾರ.ಮೃತರನ್ನು ಹಂಪಯ್ಯ 65, ಪ್ರೇಮ 58, ಮಂಜಯ್ಯ 60 ಮತ್ತು ಪ್ರಭಾಕರ್ 40 ವರ್ಷ ಎಂದು ಗುರುತಿಸಲಾಗಿದೆ. ಇವರೆಲ್ಲರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಕೂಕಿನ ಚಿಕ್ಕಜಾಜೂರುಅಂಚೆ ಚನ್ನಪಟ್ಟಣ ಗ್ರಾಮದವರು ಎಂದು ತಿಳಿದುಬಂದಿದೆ. ಒಂದೇ ಕುಟುಂಬದ ಒಟ್ಟು17 ಮಂದಿ ಪ್ರವಾಸ ಬಂದಿದ್ದರು ಎನ್ನಲಾಗಿದೆ.
ಸಂಬಂಧಿಕರ ಆಕ್ರಂದನ: ಮೃತದೇಹಗಳನ್ನು ಮೂಡಿಗೆರೆಯ ತಾಲೂಕ್ ಆಸ್ಪತ್ರೆಯ ಶವಗಾರಕ್ಕೆ ತರುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಶವಗಾರದಲ್ಲಿ ಮೃತದೇಹಗಳನ್ನು ನೋಡಿದ ಆಲ್ಟೋ ಕಾರ್ ನಲ್ಲಿದ್ದ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದ ದೃಶ್ಯ ಮನಕಲಕುತ್ತಿತ್ತು. ಸ್ಥಳೀಯರು ಅಪಘಾತದಲ್ಲಿ ಗಾಯಗೊಂಡವರಿಗೆ ಹಾರೈಕೆ ಮಾಡಿದರು. ಅಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿಸ ಸರಣಿ ಅಪಘಾತವಾದ ಹಿನ್ನೆಲೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸವಾರರನ್ನು ಹಾಗೂ ಸ್ಥಳೀಯರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.