
ಬೆಂಗಳೂರು (ಮೇ.4): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಡುವಿನ ಹೈ-ವೋಲ್ಟೇಜ್ ಐಪಿಎಲ್ ಪಂದ್ಯದ ವೇಳೆ ಟಿಕೆಟ್‌ಗಳನ್ನು ಬ್ಲಾಕ್‌ನಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದ ದಂಧೆಕೋರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ 32 ಟಿಕೆಟ್‌ಗಳು ಮತ್ತು 1 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯ ವಿವರ:
ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ಮಚ್ಚೀಂದ್ರ ನೇತೃತ್ವದ ಸ್ಪೆಷಲ್ ವಿಂಗ್ ತಂಡ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿತು. ಆರೋಪಿಗಳು 1,200 ರೂ. ಮುಖಬೆಲೆಯ ಟಿಕೆಟ್‌ಗಳನ್ನು 10,000 ರೂ.ಗೆ ಮಾರಾಟ ಮಾಡುತ್ತಿದ್ದರು. ಟಿಕೆಟ್ ಖರೀದಿಸುವ ನೆಪದಲ್ಲಿ ಪೊಲೀಸರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ.
ಇದನ್ನೂ ಓದಿ: ಐಪಿಎಲ್‌ನಲ್ಲಿ ಕೊಹ್ಲಿ ಐತಿಹಾಸಿಕ ಸಾಧನೆ, ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿದ ವಿರಾಟ್
ನಾಲ್ವರು ಆರೋಪಿಗಳನ್ನು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳು ಕ್ರೀಡಾಂಗಣದ ಸುತ್ತಮುತ್ತ ಸಂಚರಿಸಿ, ಅಭಿಮಾನಿಗಳಿಗೆ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುವ ದಂಧೆಯಲ್ಲಿ ತೊಡಗಿದ್ದರು.
ಈ ದಂಧೆಯ ಹಿಂದೆ ಇನ್ನಷ್ಟು ಜನರು ಭಾಗಿಯಾಗಿರುವ ಸಾಧ್ಯತೆ ಹಿನ್ನೆಲೆ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಗೊಳಿಸಿದೆ. ಸದ್ಯ ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: ಇವರೇ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಪಂಚ ಪಾಂಡವರು! ಇವರಿರೋವಾಗ ಮತ್ಯಾಕೆ ಭಯ?
ಆರ್‌ಸಿಬಿ ಅಭಿಮಾನಿಗಳಿಂದ ಚೆನ್ನೈನ ಜೈಲು ಜೆರ್ಸಿ ಸೇಲ್!
ಆರ್‌ಸಿಬಿ ಹಾಗೂ ಚೆನ್ನೈ ಅಭಿಮಾನಿಗಳ ನಡುವಿನ ಕಿತ್ತಾಟ ಮತ್ತೊಂದು ಹಂತ ತಲುಪಿದೆ. ಇತ್ತೀಚೆಗೆ ಚೆನ್ನೈ ಕ್ರೀಡಾಂಗಣದಲ್ಲಿ ಲಾಲಿಪಾಪ್ ಪ್ರದರ್ಶಿಸಿ ಆರ್‌ಸಿಬಿ ಅಭಿಮಾನಿಗಳನ್ನು ಚೆನ್ನೈ ಅಭಿಮಾನಿಗಳು ಕೆಣಕಿದ್ದರು. ಇದಕ್ಕೆ ಪ್ರತಿಯಾಗಿ ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಆರ್‌ಸಿಬಿ ಅಭಿಮಾನಿಗಳು ಚೆನ್ನೈ ತಂಡದ ‘ಜೈಲು ಜೆರ್ಸಿ’ಯನ್ನು ಮಾರಾಟ ಮಾಡಿದ್ದಾರೆ.
ಫಿಕ್ಸಿಂಗ್ ಪ್ರಕರಣದಲ್ಲಿ ಚೆನ್ನೈ ತಂಡ 2016, 2017ರ ಐಪಿಎಲ್‌ನಿಂದ ನಿಷೇಧಕ್ಕೊಳಗಾಗಿತ್ತು. ಇದನ್ನೇ ನೆನಪಿಸುವ ರೀತಿಯಲ್ಲಿ ಕ್ರೀಡಾಂಗಣದ ಹೊರಗಡೆ ಕಪ್ಪು-ಬಿಳುಪಿನ, 2016-17 ಎಂದು ಬರೆದಿರುವ ಜೆರ್ಸಿ ಮಾರಾಟ ಮಾಡಿದ್ದಾರೆ. ಇದರ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ