ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ.
ಗದಗ (ಏ.19): ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಕಿರಿಯ ಮಗ ಕಾರ್ತಿಕ್ ಬಾಕಳೆ (27), ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮೀ ಹಾದಿಮನಿ (45), ಪುತ್ರಿ ಆಕಾಂಕ್ಷಾ ಹಾದಿಮನಿ (16) ಕೊಲೆಯಾದವರು. ಅಪರಿಚಿತ ದುಷ್ಕರ್ಮಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಕೃತ್ಯ ಎಸಗಿದ್ದು, ಈ ನಾಲ್ವರ ಕೊಲೆಗೆ ಗದಗ ನಗರ ಬೆಚ್ಚಿ ಬಿದ್ದಿದೆ.
ರಾತ್ರಿ ಮನೆಗೆ ನುಗ್ಗಿ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದ ಪರಶುಮ್ ಕುಟುಂಬದ ಹತ್ಯೆಗೈಯಲಾಗಿದ್ದು, ನಂತರ ನೆಲಮಹಡಿಯಲ್ಲಿ ಮಲಗಿದ್ದ ಕಾರ್ತಿಕ್ ಹತ್ಯೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ತಿಕ್ ಮದುವೆ ನಿಶ್ಚಯ ಕಾರ್ಯಕ್ರಮಕ್ಕೆ ಬಂದಿದ್ದ ಸಂಬಂಧಿಕರ ಹತ್ಯೆ ಮಾಡಲಾಗಿದ್ದು, ಸ್ಥಳಕ್ಕೆ ಗದಗ ಎಸ್ ಪಿ ಬಿಎಸ್ ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ಮೂರು ಚಾಕುಗಳನ್ನ ದುಷ್ಕರ್ಮಿಗಳು ಹಿತ್ತಲಲ್ಲಿ ಎಸೆದುಹೋಗಿದ್ದಾರೆ. ಮನೆಯ ಹಿಂಬದಿಯ ಚರಂಡಿಯಲ್ಲಿ ಚಾಕು, ಶೂ ಪತ್ತೆಯಾಗಿದ್ದು, ಚಿನ್ನದ ಬಳೆಗಳು, ಎರಡು ಜತೆ ಶೂಗಳು ಪತ್ತೆಯಾಗಿವೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಪರಶುರಾಮ, ಲಕ್ಷ್ಮೀ ಹಾದಿಮನಿ, ಪುತ್ರಿ ಆಕಾಂಕ್ಷಾ ಈ ಮೂವರು ಕೊಪ್ಪಳ ಮೂಲದವ್ರು.
ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಕಾರ್ಯಕ್ರಮಕ್ಕಾಗಿ ಆಗಮಿಸಿದ ಸಂಬಂಧಿಗಳು. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಇನ್ನು ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ರು ಎಂದು ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ. ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ ಸೇರಿ ಹಲವು ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
Bengaluru: ಸಂಪ್‌ಗೆ ಬಿದ್ದ ಮಗನ ರಕ್ಷಿಸಲು ಹೋದ ತಾಯಿಯೂ ಸಾವು
ಇನ್ನು ಕೊಲೆಯಾದ ಸ್ಥಳಕ್ಕೆ ಸಚಿವ ಎಚ್.ಕೆ.ಪಾಟೀಲ ಭೇಟಿ ನೀಡಿದ್ದು, ನಗರಸಭೆ ಮಾಜಿ ಉಪಾಧ್ಯಕ್ಷ ಪ್ರಕಾಶ್ ಬಾಕಳೆ ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ. ಈ ವೇಳೆ ಕೊಲೆಗಾರರಿಗೆ ಗಲ್ಲು ಶಿಕ್ಷೆ ಕೊಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದು, ಕೊಲೆಗಡುಕರ ಪತ್ತೆಗೆ ಅಗತ್ಯ ಕ್ರಮದ ಭರವಸೆಯನ್ನು ಸಚಿವ ಎಚ್‌ಕೆಪಿ ನೀಡಿದರು.