ಬಿಹಾರದಲ್ಲಿ ತುಮಕೂರಿನ ಒಂದೇ ಕುಟುಂಬದ ನಾಲ್ವರ ಸಾವು

Kannadaprabha News   | Kannada Prabha
Published : Feb 07, 2026, 07:29 AM IST
CRIME NEWS

ಸಾರಾಂಶ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್‌ನ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ನಾಲಂದಾ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್‌ನ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ತಾಯಿ ಜಿ.ಆರ್.ಸುಮಂಗಲಾ (78), ಮಗ ಜಿ.ಆರ್.ನಾಗಪ್ರಸಾದ್ (50) ಹಾಗೂ ಆಕೆಯ ಇಬ್ಬರು ಪುತ್ರಿಯರಾದ ಜಿ.ಆರ್.ಶಿಲ್ಪಾ (48) ಹಾಗೂ ಜಿ.ಆರ್‌.ಶ್ರುತಾ (43) ಎಂದು ಗುರುತಿಸಲಾಗಿದೆ. ಸುಮಂಗಲಾ ರತ್ನಬಾಲ ರಾಜು ಎಂಬುವವರ ಪತ್ನಿ ಎಂದು ತಿಳಿದುಬಂದಿದೆ.

ಮೃತರಿಗೆ ಸೇರಿದ ಮೊಬೈಲ್‌ ಪೋನ್‌ಗಳು, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಎಟಿಎಂ ಕಾರ್ಡ್‌ ಸೇರಿದಂತೆ ಹಲವು ದಾಖಲೆಗಳು, ₹1,18,000 ಹಣ ಹಾಗೂ ದೊಡ್ಡ ಪ್ರಮಾಣದ ನಿದ್ರೆ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಗಿದ್ದೇನು?:

ರಾಜಗೀರ್‌ ಬೌದ್ಧ ಮತ್ತು ಜೈನರಿಗೆ ಅತ್ಯಂತ ಪವಿತ್ರವೆನಿಸಿದ ಯಾತ್ರಾ ಸ್ಥಳ. ಈ ನಾಲ್ವರೂ ನೇಪಾಳಕ್ಕೆ ಪ್ರವಾಸ ಹೋಗಿ ಜ.30ರಂದು ರಾಜಗೀರ್‌ಗೆ ಬಂದು ಕೊಠಡಿ ಬುಕ್‌ ಮಾಡಿದ್ದರು. ಮುಂದೆ ನಾಲಂದಾದ ಪಾವಾಪುರಿಗೆ ಹೋಗಲು ಯೋಜಿಸಿದ್ದರು. ಶುಕ್ರವಾರ ಬೆಳಿಗ್ಗೆ 9:40ರ ಸುಮಾರಿಗೆ ಕೊಠಡಿಯಿಂದ ಕೊಳೆತ ವಾಸನೆ ಬಂದ ಹಿನ್ನೆಲೆ ಧರ್ಮಶಾಲೆಯ ಮ್ಯಾನೇಜರ್‌ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ನಾಲ್ಕೂ ಮಂದಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 3 ದಿನದಿಂದ ಕೊಠಡಿಯ ಬಾಗಿಲನ್ನೇ ತೆರೆದಿರಲಿಲ್ಲ ಎನ್ನಲಾಗಿದೆ. ಮೃತರಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಪರಿಶೀಲಿಸಿದಾಗ ತುಮಕೂರು ಮೂಲದವರು ಎಂದು ತಿಳಿದುಬಂದಿದೆ.

ಕರ್ನಾಟಕ ಪೊಲೀಸರ ಸಂಪರ್ಕ

‘ಕರ್ನಾಟಕ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಗುಬ್ಬಿ ಪೊಲೀಸರ ನೆರವಿನೊಂದಿಗೆ ಮೃತರ ಕುಟುಂಬಕ್ಕೆ ಮಾಹಿತಿ ತಲುಪಿಸಿದ್ದೇವೆ. ಎಲ್ಲಾ ಶವಗಳನ್ನು ನಾಲಂದಾ ಜಿಲ್ಲೆಯ ಬಿಹಾರ್ ಶರೀಫ್‌ನಲ್ಲಿರುವ ಸದರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವೀಡಿಯೊಗ್ರಫಿಯೊಂದಿಗೆ ವೈದ್ಯಕೀಯ ಮಂಡಳಿಯು ಶವಪರೀಕ್ಷೆ ನಡೆಸಲಿದೆ’ ಎಂದು ರಾಜಗೀರ್‌ ಪೊಲೀಸರು ತಿಳಿಸಿದ್ದಾರೆ.

ಎಲ್ಲ ದಿಕ್ಕುಗಳಿಂದಲೂ ಪ್ರಕರಣದ ತನಿಖೆ ನಡೆಸಲು ನಾಲಂದಾ ಪೊಲೀಸ್ ವರಿಷ್ಠಾಧಿಕಾರಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಈ ಸಂಬಂಧ ಇಬ್ಬರು ಸದಸ್ಯರ ತಂಡವನ್ನು ಕರ್ನಾಟಕದ ಗುಬ್ಬಿಗೆ ಕಳುಹಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka police cyber operation ಸೈಬರ್‌ ವಂಚನೆಗೆ ನಕಲಿ ಬ್ಯಾಂಕ್‌ಖಾತೆ ಪೂರೈಸುತ್ತಿದ್ದ 13 ಜನ ಸೆರೆ
ಧೂಮ್ ಸ್ಟೈಲ್ ದರೋಡೆ: ಮೂವಿಂಗ್ ಲಾರಿಯನ್ನೇ ಚೇಸ್ ಮಾಡಿ 25 ಲಕ್ಷದ ಫ್ಲಿಪ್‌ಕಾರ್ಟ್ ಮಾಲು ಲೂಟಿ ಮಾಡಿದ ಖದೀಮರು!