
ಕಲಬುರಗಿ (ಡಿ.21): ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಮೃತ ದುರ್ದೈವಿಗಳಾಗಿದ್ದಾರೆ. ಮೃತರೆಲ್ಲಾರು ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೂಜಾ ದೊಡ್ಡಮನಿ (30) ಪ್ರಾಣಾಪಾಯದಿಂದ ಪಾರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಗಂಡನ ಜೊತೆ ಜಗಳವಾಡಿ ಇಂಡಿ ತಾಲೂಕಿನ ಸುರಗಿಹಳ್ಳಿ ಗ್ರಾಮದಿಂದ ರಾತ್ರಿ ಹೊತ್ತು 5 ವರ್ಷದ ಮಗುವಿನ ಕರೆದು ಕೊಂಡು ಅಫಜಲಪುರಕ್ಕೆ ಬಂದ ಮಾಡ್ಯಾಳ ಗ್ರಾಮದ ಮೃತ ಶಂಕರನ ಮಗಳು ಪೂಜಾ ಗಂಡ ಮಹಾಂತೇಶ ದೊಡ್ಡಮನಿ. ರಾತ್ರಿ ಜಗಳವಾಡಿ ಬಂದ ಮಗಳನ್ನ ಅಫಜಲಪುರದಿಂದ ಮಾಡ್ಯಾಳಕ್ಕೆ ಕರೆದೊಯ್ಯಲು ಬಂದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲು ಸಮರ್ಥರಿರುವ ವ್ಯಕ್ತಿ: ಎಚ್.ವಿಶ್ವನಾಥ್
ದ್ವಿಚಕ್ರ ವಾಹನ, ಟ್ಯಾಂಕರ್ ಲಾರಿ ನಡುವೆ ಅಪಘಾತ: ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ತಾಲೂಕಿನ ಮಲ್ಲೂಪುರದ ಬಳಿ ಜರುಗಿದೆ. ತಗಡೂರು ಗ್ರಾಮದ ಶಿವಮಲ್ಲೆಗೌಡರ ಪುತ್ರ ಮಹೇಶ್ (24) ಮತ್ತು ಅದೇ ಗ್ರಾಮದ ನಾಗರಾಜು ಎಂಬವರ ಪುತ್ರ ಮಹೇಶ್ (23) ಮೃತ ಯುವ ಕಾರ್ಮಿಕರು. ಸಾವಿನಲ್ಲೂ ಕುಚುಕು ಗೆಳೆಯರು ಒಂದಾಗಿದ್ದಾರೆ.
ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದ ಮೃತ ಗೆಳೆಯರು, ಒಂದೇ ಬೈಕ್ ನಲ್ಲಿ ಬುಧವಾರ ಬೆಳಗ್ಗೆ ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲೂಪುರ ಗ್ರಾಮದ ಬಳಿ ಟ್ಯಾಂಕರ್ ಲಾರಿಯು ಕಾರ್ಮಿಕರು ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಮಹೇಶ್ ಮೃತಪಟ್ಟರು.
ಹೊಗೆ ಬಾಂಬ್ ಬಗ್ಗೆ ಪ್ರಧಾನಿ ಮಾತನಾಡದಿರುವುದು ದುರಂತ: ಸಚಿವ ಶಿವರಾಜ ತಂಗಡಗಿ
ಮತ್ತೊರ್ವ ಯುವಕ ಮಹೇಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ನೊಂದ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸೈ ಆಕಾಶ್ ಭೇಟಿ ನೀಡಿ, ಟ್ಯಾಂಕರ್ ನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ. ಟ್ಯಾಂಕರ್ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ