
ಜೇವರ್ಗಿ(ಸೆ.16):ಕಳೆದ 15 ದಿನಗಳಲ್ಲಿ 4 ಅಪರಿಚಿತ ಶವ ಪತ್ತೆಯಾಗಿದ್ದು, ಮೂರು ಶವ ಜೇವರ್ಗಿ ತಾಲೂಕಿನ ಭೀಮಾತೀರದಲ್ಲಿ ಪತ್ತೆಯಾದರೆ, ಒಂದು ಶವ ಕೃಷ್ಣಾ ಕಾಲುವೆಯಲ್ಲಿ ಪತ್ತೆಯಾಗಿದೆ. ಹೀಗಾಗಿ ಭೀಮಾತೀರದ ಗ್ರಾಮಗಳಲ್ಲಿ ಭಯ ಆವರಿಸಿದೆ.
10 ದಿನಗಳ ಹಿಂದೆ ನರಿಬೋಳ ಗ್ರಾಮದ ಭೀಮಾ ನದಿಯಲ್ಲಿ ಹಗ್ಗ ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ನಂತರ ರಾಜವಾಳ ಗ್ರಾಮದ ಭೀಮಾನದಿಯಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಈಗ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬಳ್ಳುಂಡಗಿ ಸೀಮಾಂತರದ ಭೀಮಾ ನದಿಯಲ್ಲಿ ಶವ ಮಂಗಳವಾರ ಪತ್ತೆಯಾಗಿದೆ. ಶವದ ಗುರುತು ವಿಳಾಸ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ನೆಲೋಗಿ ಠಾಣೆಯ ಸಬ್ ಇನ್ಸಪೆಕ್ಟರ್ ಮಲ್ಲಣ್ಣ ಯಲಗೋಡ ಹಾಗೂ ಸಿಬ್ಬಂದಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಗಾಂಜಾ ಮಾರಾಟ: ಭಟ್ಕಳ ಜಾಲಿ ಬೀಚ್‌ನಲ್ಲಿ ನಾಲ್ವರ ಬಂಧನ
ಯಡ್ರಾಮಿ ತಾಲೂಕಿನ ಆಲೂರ ಗ್ರಾಮದ ಕೃಷ್ಣಾ ಭಾಗ್ಯ ಜಲ ನಿಗಮದ ಜೇವರ್ಗಿ ಶಾಖಾ ಕಾಲುವೆಯಲ್ಲಿ 35ರಿಂದ 40 ವರ್ಷದ ಅಪರಿಚಿತ ಶವ ಪತ್ತೆಯಾಗಿದೆ. ಒಂದು ವಾರದ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಯಡ್ರಾಮಿ ಠಾಣೆಯ ಸಬ್ ಇನ್ಸಪೆಕ್ಟರ್ ಗಜಾನಂದ ಬಿರಾದಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ