Kolar Road Accident: ಬ್ರಿಡ್ಜ್‌ನಿಂದ ಕೆಳಗೆ ಬಿದ್ದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು!

Published : Nov 24, 2025, 10:55 AM IST
Four youths killed in car crash Chennai to Bengaluru highway kolar

ಸಾರಾಂಶ

ಕೋಲಾರ ಜಿಲ್ಲೆಯ ಮಾಲೂರು ಬಳಿ ಚೆನ್ನೈ-ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿದ್ರೆ ಮಂಪರಿನಿಂದ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಚೆನ್ನೈ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೋಲಾರ (ನ.24): ಚೆನ್ನೈ-ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಅಬ್ಬೇನಹಳ್ಳಿ ಬ್ರಿಡ್ಜ್‌ನಿಂದ ಕೆಳಗೆ ಬಿದ್ದ ಕಾರು!

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವರ್ಣಾ ಕಾರು, ಚಾಲಕನ ನಿದ್ರೆ ಮಂಪರಿನಿಂದ ನಿಯಂತ್ರಣ ತಪ್ಪಿದೆ. ವೇಗವಾಗಿದ್ದ ಕಾರು ಅಬ್ಬೇನಹಳ್ಳಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ.

​ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

​ಮೃತ ದುರ್ದೈವಿಗಳ ವಿವರ:

ಮೃತಪಟ್ಟ ನಾಲ್ವರೂ ಯುವಕರು ಚೆನ್ನೈ ಮೂಲದವರಾಗಿದ್ದು, ಅವರನ್ನು ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಮತ್ತು ಜಯಶಂಕರ್ (30) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

​ಈ ಸಂಬಂಧ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!