ಬೆಂಗಳೂರು: ಬಿಬಿಎಂಪಿ ಹೆಸರಲ್ಲಿ ಕರೆ ಮಾಡಿ ಸ್ನೇಹಿತರಿಗೇ ವಂಚನೆ..!

Published : Jan 26, 2023, 06:00 AM IST
ಬೆಂಗಳೂರು: ಬಿಬಿಎಂಪಿ ಹೆಸರಲ್ಲಿ ಕರೆ ಮಾಡಿ ಸ್ನೇಹಿತರಿಗೇ ವಂಚನೆ..!

ಸಾರಾಂಶ

ವಿದ್ಯಾರಣ್ಯಪುರದ ಎಂ.ಹರ್ಷ, ವಿಜಯನಗರದ ಡಿ.ರೂಪೇಶ್‌ ಹಾಗೂ ಮೈಸೂರು ರಸ್ತೆ ಬಾಪೂಜಿ ನಗರದ ಆರ್‌.ಮೋಹನ್‌ ಬಂಧಿತರಾಗಿದ್ದು, ಈ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ. 

ಬೆಂಗಳೂರು(ಜ.26):  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸುವುದಾಗಿ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಜನರಿಗೆ ಕರೆ ಮಾಡಿ ಹಣ ಪಡೆದು ವಂಚಿಸುತ್ತಿದ್ದ ಮೂವರು ಕಿಡಿಗೇಡಿಗಳನ್ನು ಈಶಾನ್ಯ ವಿಭಾಗದ ಸಿಇಎನ್‌ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ವಿದ್ಯಾರಣ್ಯಪುರದ ಎಂ.ಹರ್ಷ, ವಿಜಯನಗರದ ಡಿ.ರೂಪೇಶ್‌ ಹಾಗೂ ಮೈಸೂರು ರಸ್ತೆ ಬಾಪೂಜಿ ನಗರದ ಆರ್‌.ಮೋಹನ್‌ ಬಂಧಿತರಾಗಿದ್ದು, ಈ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ವಿದ್ಯಾರಣ್ಯಪುರದ ಎಲೆಕ್ಟ್ರಿಶಿಯನ್‌ ರಾಘವೇಂದ್ರ ಅವರಿಗೆ ಉಚಿತವಾಗಿ ಲ್ಯಾಪ್‌ಟಾಪ್‌ ನೀಡುವುದಾಗಿ ನಂಬಿಸಿ .40,500 ವಸೂಲಿ ಮಾಡಿ ದುಷ್ಕರ್ಮಿಗಳು ವಂಚಿಸಿದ್ದರು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಸಿಇಎನ್‌ ಠಾಣೆ ಇನ್‌ಸ್ಪೆಕ್ಟರ್‌ ಮಲ್ಲಿಕಾರ್ಜುನ್‌ ನೇತೃತ್ವದ ತಂಡವು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Bengaluru: ಜಡ್ಜ್ ಮನೆಯನ್ನೂ ಬಿಡದ ಖದೀಮರು: 60ಕ್ಕೂ ಹೆಚ್ಚು ಬಾರಿ ಕಳ್ಳತನ ಮಾಡಿದ್ದ ಮನೆಗಳ್ಳರು ಅರೆಸ್ಟ್‌!

ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಕೊಡುವುದಾಗಿ ಬಿಬಿಎಂಪಿಯ ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿತ್ತು. ಈ ಬಗ್ಗೆ ಮಾಹಿತಿ ತಿಳಿದ ಆರೋಪಿಗಳು, ಸಾರ್ವಜನಿಕರಿಗೆ ಕರೆ ಮಾಡಿ ಬಿಎಂಪಿಯಿಂದ ಉಚಿತವಾಗಿ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸುವಂತೆ ಹೇಳುತ್ತಿದ್ದರು. ಆಗ ತಮ್ಮ ಮಾತಿಗೊಪ್ಪಿದ ಜನರಿಗೆ ಮೊದಲು ಅರ್ಜಿ ಶುಲ್ಕ ನೆಪದಲ್ಲಿ .1,500 ವಸೂಲಿ ಮಾಡುತ್ತಿದ್ದರು. ನಂತರ ದಾಖಲೆಗಳ ದೃಢೀಕರಣ ಪರಿಶೀಲನೆ ಶುಲ್ಕ ಹಾಗೂ ಬಿಬಿಎಂಪಿ ಶುಲ್ಕ ಹೀಗೆ ವಿವಿಧ ಕಾರಣ ಹೇಳಿ ಹಣ ಸುಲಿಗೆ ಮಾಡಿದ್ದರು. ಹಣ ಸಂದಾಯವಾದ ಬಳಿಕ ಸಂಪರ್ಕ ಕಡಿತಗೊಳಿಸುತ್ತಿದ್ದ ವಂಚಕರು, ಜನರಿಂದ 5ರಿಂದ 42 ಸಾವಿರ ರು.ವರೆಗೆ ವಸೂಲಿ ಮಾಡಿದ್ದರು.

ಸ್ನೇಹಿತರ ಬಳಗಕ್ಕೇ ವಂಚನೆ:

ಈ ಮೂವರು ಆರೋಪಿಗಳು ಬಾಲ್ಯ ಸ್ನೇಹಿತರಾಗಿದ್ದು, ಎಸ್‌ಎಸ್‌ಎಲ್‌ಸಿಗೆ ಓದು ನಿಲ್ಲಿಸಿದ್ದ ಕೆಲಸವಿಲ್ಲದೆ ಅಲೆಯುತ್ತಿದ್ದರು. ತಮ್ಮ ಸಂಬಂಧಿಕರು ಹಾಗೂ ಸ್ನೇಹಿತರ ಮೊಬೈಲನ್ನು ನೋಡುವ ನೆಪದಲ್ಲಿ ಪಡೆದು ಬಳಿಕ ಅವರ ಕಾಂಟೆಕ್ಟ್ ಲಿಸ್ಟ್‌ನಲ್ಲಿದ್ದ ಕೆಲವರ ಮೊಬೈಲ್‌ ನಂಬರ್‌ಗಳನ್ನು ಆರೋಪಿಗಳು ಪಡೆಯುತ್ತಿದ್ದರು. ಈ ಮೊಬೈಲ್‌ ನಂಬರ್‌ಗಳಿಗೆ ಬಿಬಿಎಂಪಿ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ವಂಚಿಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು