
ಗದಗ (ಸೆ.11):ಕಾರೊಂದರ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ನಗರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.
ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು , ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಹಸೀನ್ ಎಂಬಾತ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾನೆ. ಈ ಫೋಟೋದಲ್ಲಿ ಇಸ್ಲಾಂ ಧರ್ಮದ ಬಾವುಟದ ಜೊತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಸ್ಪಷ್ಟವಾಗಿ ಕಂಡುಬಂದಿದ್ದು, ಇದು ದೇಶದ ಸಾರ್ವಭೌಮತ್ವಕ್ಕೆ ವಿರೋಧ ಎಂದು ಆರೋಪಿಸಲಾಗಿದೆ.
ಈ ಪೋಸ್ಟ್ ಅನ್ನು ಅಬ್ದುಲ್ ಎಂಬಾತ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮತ್ತೊಮ್ಮೆ ಹಂಚಿಕೊಂಡು, ವ್ಯಾಪಕವಾಗಿ ಹರಡುವಂತೆ ಮಾಡಿದ್ದಾನೆ. ಘಟನೆಯು ಹಬ್ಬದ ದಿನ ನಡೆದಿದ್ದರೂ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯರು ಈ ಕೃತ್ಯವನ್ನು ದೇಶವಿರೋಧಿ ಎಂದು ಕಟುವಾಗಿ ಖಂಡಿಸಿದ್ದಾರೆ. ಇದು ನಮ್ಮ ರಾಷ್ಟ್ರೀಯ ಭಾವನೆಗಳನ್ನು ಧಿಕ್ಕರಿಸುವಂತಿದ್ದು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಕಲಂ299, 353(2) ಮತ್ತು 3/5ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ