
ಮಂಡ್ಯ (ಸೆ.7): ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯಧರ್ಮಿಯರು ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದ್ದು ಕೆಲವೊತ್ತು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ನಡೆದಿದೆ.
ಇಂದು (ಸೆಪ್ಟೆಂಬರ್ 7, 2025) ಸಂಜೆ ನಡೆದ ಮೆರವಣಿಗೆಯ ಸಂದರ್ಭದಲ್ಲಿ ಅನ್ಯಧರ್ಮಿಯರು ಕಲ್ಲು ತೂರಿದ ಆರೋಪ ಕೇಳಿಬಂದಿದ್ದು, ಪ್ರತಿಯಾಗಿ ಮೆರವಣಿಗೆಯಲ್ಲಿ ಭಾಗವಹಿಸಿದವರಿಂದಲೂ ಕಲ್ಲೆಸೆತ ನಡೆದಿದೆ. ಈ ಘಟನೆಯಿಂದ ಸುಮಾರು 10 ರಿಂದ 15 ನಿಮಿಷಗಳ ಕಾಲ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಚನ್ನೇಗೌಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ವಿಗ್ರಹವನ್ನು ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ, ಕೆಲವರು ಕಲ್ಲು ತೂರಿದ್ದಾರೆ ಎನ್ನಲಾದ ಆರೋಪದಿಂದ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಯಿತು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದ್ದು, ಮದ್ದೂರು ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ಎರಡೂ ಗುಂಪುಗಳನ್ನು ಚದುರಿಸಿದರು. ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.
ಘಟನೆಯ ಬಳಿಕ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು, ಗಣೇಶ ವಿಗ್ರಹವನ್ನು ವಿಸರ್ಜನೆಗೆ ಕಳುಹಿಸಿಕೊಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಶಾಂತಿ ಕಾಪಾಡಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳೀಯರು ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ