
ಹಿರಿಯಡ್ಕ(ಜೂ.26): ಉಡುಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಗರುಡ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳಿಬ್ಬರು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಸಂಭವಿಸಿದೆ.
ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೀನ್, ಪ್ರಿಸನರ್ಸ್ ಕಾಲ್ ಸಿಸ್ಟಂ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ. ಶಿರೋಳ ಅವರ ಜೊತೆ ಜಗಳ ತೆಗೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ.
ಹಲ್ಲೆಯಾಗುವ ಭೀತಿ: ತುಮಕೂರಿಗೆ ದರ್ಶನ್ ಸಹಚರರ ಶಿಫ್ಟ್‌ಗೆ ಪೊಲೀಸರ ಮನವಿ
ಅಲ್ಲದೆ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಅರಂಭಿಸಿ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆದು ಹೊಡೆಯಲು ಪ್ರಯತ್ನಿಸಿದ್ದಾರೆ. ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟು ಮತ್ತು ಮರದ ಕುರ್ಚಿಯನ್ನು ತೆಗೆದುಕೊಂಡು ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ