'ಅಣ್ಣ ನನ್ನ ಬಟ್ಟೆ ಬಿಚ್ಚಿದರು..' ಬದ್ಲಾಪುರದಲ್ಲಿ ಲೈಂಗಿಕ ಶೋಷಣೆಗೆ ಒಳಗಾದ ಬಾಲಕಿಯ ಮಾತು!

Published : Aug 21, 2024, 09:27 AM ISTUpdated : Aug 21, 2024, 12:55 PM IST
'ಅಣ್ಣ ನನ್ನ ಬಟ್ಟೆ ಬಿಚ್ಚಿದರು..' ಬದ್ಲಾಪುರದಲ್ಲಿ ಲೈಂಗಿಕ ಶೋಷಣೆಗೆ ಒಳಗಾದ ಬಾಲಕಿಯ ಮಾತು!

ಸಾರಾಂಶ

ಥಾಣೆಯ ಬದ್ಲಾಪುರದಲ್ಲಿರುವ ನರ್ಸರಿ ಶಾಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.

ಮುಂಬೈ (ಆ.21): ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ನರ್ಸರಿಯಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಬಾಲಕಿಯೊಬ್ಬಳ ಪೋಷಕರು ನೀಡಿದ ದೂರಿನಲ್ಲಿ ಮಗು ಅನುಭವಿಸಿದ ಸಂಕಟದ ವಿವರವಿದೆ. ಎಫ್‌ಐಆರ್‌ನ ಪ್ರಕಾರ, ಘಟನೆಯು ಆಗಸ್ಟ್ 13 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರ ನಡುವೆ ಸಂಭವಿಸಿದೆ. ಒಬ್ಬ ಬಾಲಕಿಯ ಕುಟುಂಬವು ಆಗಸ್ಟ್ 13 ರಂದು ಈ ವಿಚಾರದಲ್ಲಿ ಮೊದಲ ಅನುಮಾನ ತಳೆದಿತ್ತು. ಇನ್ನೊಂದು ಮಗುವಿನ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ ಬಳಿಕ, ಲೈಂಗಿಕ ದೌರ್ಜನ್ಯದ ದೂರು ದಾಖಲು ಮಾಡಲು ನಿರ್ಧಾರ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ ಎಂದು ದೂರುದಾರರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ವರದಿಯಲ್ಲಿ ಆಕೆಯ ಕನ್ಯಾಪೊರೆ ಹರಿದುಹೋಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವೇಳೆ ಬಾಲಕಿ ಭಯಭೀತಳಾಗಿದ್ದಳು ಎಂದು ದೂರುದಾರರು ಉಲ್ಲೇಖಿಸಿದ್ದಾರೆ. ಶಾಲೆಯಲ್ಲಿ 'ದಾದಾ' (ಮರಾಠಿ ಭಾಷೆಯಲ್ಲಿ ಅಣ್ಣ) ತನ್ನ ಬಟ್ಟೆಗಳನ್ನು ಕಳಚಿ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆ ಎಂದು ಕುಟುಂಬಕ್ಕೆ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಆಗಸ್ಟ್ 16 ರಂದು ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ. ಪೊಲೀಸರು 12 ಗಂಟೆಗಳ ನಂತರ ಅಂದರೆ ಆಗಸ್ಟ್ 16 ರಂದು ರಾತ್ರಿ 9 ಗಂಟೆ ಸುಮಾರಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ,  ಶಾಲೆಯಲ್ಲಿ ಅಟೆಂಡರ್ ಆಗಿದ್ದ ಆರೋಪಿಗಳು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ನರ್ಸರಿ ಮಕ್ಕಳಿಗೆ ಲೈಂಗಿಕ ದೌರ್ಜನ್ಯ: ಥಾಣೆಯಲ್ಲಿ ಶಾಲಾ ಕಟ್ಟಡ ಧ್ವಂಸ, ರೈಲು ತಡೆ

ಆರೋಪಿಯನ್ನು ಅಕ್ಷಯ್ ಶಿಂಧೆ ಎಂದು ಗುರುತಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಸೆಕ್ಷನ್ 65(2) (ಹನ್ನೆರಡು ವರ್ಷದೊಳಗಿನ ಬಾಲಕಿಯ ಮೇಲೆ ಅತ್ಯಾಚಾರ), 74 (ಆಕ್ರಮಣ ಅಥವಾ ಕ್ರಿಮಿನಲ್ ಬಲದ ಅಡಿಯಲ್ಲಿ ದೌರ್ಜನ್ಯದ ಉದ್ದೇಶ), 75 (ಲೈಂಗಿಕ ಕಿರುಕುಳ ಅಪರಾಧಗಳು), ಮತ್ತು ಭಾರತೀಯ ನ್ಯಾಯ ಸಂಹಿತೆಯ 76 (ವಿವಸ್ತ್ರಗೊಳ್ಳುವ ಉದ್ದೇಶದಿಂದ ಬಳಸಿದ ಆಕ್ರಮಣ ಅಥವಾ ಕ್ರಿಮಿನಲ್ ಬಲ) ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ.

ಹುಡುಗಿಯರು ಲೈಂಗಿಕ ಕಾಮನೆ ನಿಯಂತ್ರಿಸಿಕೊಳ್ಳಬೇಕು ಎಂಬ ಆದೇಶ ರದ್ದು: ಸುಪ್ರೀಂ ಕೋರ್ಟ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು