
ಪಣಜಿ (ಮಾ.10): 11.67 ಕೋಟಿ ರು. ಮೌಲ್ಯದ 11 ಕೇಜಿ ಗಾಂಜಾ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಗೌತಮ್ (23) ಎಂಬಾತನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಗೋವಾದ ಇತಿಹಾಸದಲ್ಲೇ ಒಂದೇ ದಿನದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡಿದ್ದು ಇದೇ ಮೊದಲು ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕ ನೇಪಾಳದಿಂದ ಭಾರತಕ್ಕೆ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದ. ಈತನ ಚಲನವಲನದ ಮೇಲೆ ರಾಜ್ಯ ಗುಪ್ತಚರ ಇಲಾಖೆ ಕಳೆದೊಂದು ತಿಂಗಳಿನಿಂದ ನಿಗಾ ಇಟ್ಟಿತ್ತು. ಮಾದಕ ದ್ಯವ್ಯ ತೆಗೆದುಕೊಂಡು ಗೋವಾಕ್ಕೆ ಬಂದ ಖಚಿತ ಮಾಹಿತಿ ಆಧರಿಸಿ, ಗುಯಿರಿಮ್‌ನಲ್ಲಿ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಸ್ಮಗ್ಲರ್ ನಟಿ ರನ್ಯಾ ಕಂಪನಿಗೆ 12 ಎಕ್ರೆ ಸರ್ಕಾರಿ ಕೈಗಾರಿಕೆ ಭೂಮಿ ಕೊಟ್ಟ ಆ ಪ್ರಭಾವಿ ರಾಜಕಾರಣಿ ಯಾರು?
ಸಿಎಂ ಸಾವಂತ್ ಹರ್ಷ:
ಈ ಕುರಿತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾತನಾಡಿ, ‘ಗೋವಾ ಸರ್ಕಾರ ಮಾದಕ ವಸ್ತುಗಳ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಗೆ ಬದ್ಧವಾಗಿದೆ. ಮಾದಕ ವಸ್ತು ಕಳ್ಳಸಾಗಣೆದಾರರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ. ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗಿಯಾದ ಗೋವಾ ಪೊಲೀಸರು ಹಾಗೂ ಅಪರಾಧ ವಿಭಾಗದ ಎಲ್ಲ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
2 ತಿಂಗಳಲ್ಲಿ 18 ಮಂದಿ ಬಂಧನ:
ರಾಜ್ಯದಲ್ಲಿ ಮಾದಕ ದ್ರವ್ಯ ಸಾಗಾಟವನ್ನು ಮಟ್ಟಹಾಕಲು ಗೋವಾ ಪೊಲೀಸರು ‘ಆಪರೇಷನ್ ಪ್ರಹಾರ್’ ಅನ್ನು ಪ್ರಾರಂಭಿಸಿದ್ದಾರೆ. 2025ರ ಮೊದಲ 2 ತಿಂಗಳಲ್ಲಿ ಉತ್ತರ ಗೋವಾದಲ್ಲಿ 18 ಜನರನ್ನು ಬಂಧಿಸಿ 40 ಲಕ್ಷ ರು. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ