ಕುಣಿಗಲ್: ವಾಮಾಚಾರ ಮಾಡುತ್ತಿದ್ದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನ ಭೀಕರ ಕೊಲೆ!

By Kannadaprabha News  |  First Published Feb 10, 2024, 9:47 PM IST

ಅತಿಥಿ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಕುಣಿಗಲ್ ತಾಲೂಕಿನ ಕುಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ.  ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಮರಿಯಪ್ಪ (47)  ಕೊಲೆಯಾದವರು


ಕುಣಿಗಲ್ (ಫೆ.10): ಅತಿಥಿ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಕುಣಿಗಲ್ ತಾಲೂಕಿನ ಕುಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. 

ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಮರಿಯಪ್ಪ (47)  ಕೊಲೆಯಾದವರು. ಮೋದೂರು ಶಾಲೆಯಲ್ಲಿ ಶಿಕ್ಷಕರಾಗಿದ್ದು ಜನಾನುರಾಗಿಯಾಗಿದ್ದ ಮರಿಯಪ್ಪ ಅವರ ಶವ ಕುಳ್ಳನಂಜಯ್ಯನ ಪಾಳ್ಯದ ಜಮೀನೊಂದರಲ್ಲಿ ಶನಿವಾರ ಮುಂಜಾನೆ ಪತ್ತೆಯಾಗಿದೆ.

Tap to resize

Latest Videos

undefined

ತುಮಕೂರು : ಮಗುವನ್ನು ಬಿಟ್ಟು ಪೋಷಕರು ಪರಾರಿ

ಶುಕ್ರವಾರ ಅಮಾವಾಸ್ಯೆ ಪ್ರಯುಕ್ತ ವಾಮಾಚಾರ ಪ್ರಯೋಗಕ್ಕೆ ಹೋಗಿ ಬೈಕ್ ನಲ್ಲಿ ಸ್ವಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿರುಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದುಷ್ಕರ್ಮಿಗಳು ಅವರನ್ನು ಜಮೀನಿನ ಮಧ್ಯ ಭಾಗದಲ್ಲಿ ಕೊಲೆ ಮಾಡಿ ಎಸೆದು ಹೋಗಿದ್ದಾರೆ. ಅವರ ತಲೆ ಮತ್ತು ಭುಜದ ಭಾಗಕ್ಕೆ ಮಚ್ಚಿನಿಂದ ಕಡಿಯಲಾಗಿದೆ. ಹಲವಾರು ಬಾರಿ ತಲೆಯನ್ನು ಕೊಚ್ಚಿದಂತೆ ಕಾಣುತ್ತಿದ್ದು, ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ.

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ!

click me!