Chikkamagaluru: ಪೊಲೀಸರ ಭರ್ಜರಿ ಕಾರ್ಯಾಚರಣೆ: 23 ಕೋಟಿ ಮೌಲ್ಯದ 40 ಕೆಜಿ ಚಿನ್ನ ವಶಕ್ಕೆ

By Govindaraj S  |  First Published Apr 19, 2023, 1:07 PM IST

ಚುನಾವಣಾ ಆಯೋಗದ ನಿದೇರ್ಶನದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಚುನಾವಣಾ ವಿಚಕ್ಷಣಾ ದಳ ಹೈ ಅಲರ್ಟ್ ಆಗಿದೆ. ಇದರ ಪರಿಣಾಮ ತರೀಕೆರೆ ತಾಲ್ಲೂಕಿನ ಎಂ.ಸಿ. ಹಳ್ಳಿ ಪೋಲಿಸ್ ಚೆಕ್ ಪೋಸ್ಟ್‌ನಲ್ಲಿ ಬರೋಬ್ಬರಿ 40 ಕೆ.ಜಿ ಗೋಲ್ಡ್ ಸೀಜ್ ಮಾಡಲಾಗಿದೆ. 


ಚಿಕ್ಕಮಗಳೂರು (ಏ.19): ಚುನಾವಣಾ ಆಯೋಗದ ನಿದೇರ್ಶನದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಚುನಾವಣಾ ವಿಚಕ್ಷಣಾ ದಳ ಹೈ ಅಲರ್ಟ್ ಆಗಿದೆ. ಇದರ ಪರಿಣಾಮ ತರೀಕೆರೆ ತಾಲ್ಲೂಕಿನ ಎಂ.ಸಿ. ಹಳ್ಳಿ ಪೋಲಿಸ್ ಚೆಕ್ ಪೋಸ್ಟ್‌ನಲ್ಲಿ ಬರೋಬ್ಬರಿ 40 ಕೆ.ಜಿ ಗೋಲ್ಡ್ ಸೀಜ್ ಮಾಡಲಾಗಿದೆ. ಸೂಕ್ತ ದಾಖಲೆ ಇಲ್ಲದೆ ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ 23 ಕೋಟಿ ಮೌಲ್ಯದ 40 ಕೆ.ಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಚಿನ್ನಾಭರಣವನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಪದೇ-ಪದೇ ಇದೇ ಚೆಕ್ ಪೋಸ್ಟ್‌ನಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನವನ್ನು ಸೀಜ್ ಮಾಡಲಾಗುತ್ತಿದ್ದು, ಚಿನ್ನಾಭರಣ ವ್ಯಾಪಾರಿಗಳು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದಾರೆಂದು ತೆರಿಗೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆಯಿಂದ ತಿಳಿದು ಬಂದಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ 3.24 ಕೋಟಿ ಜಪ್ತಿ: ಚುನಾವಣಾ ಅಕ್ರಮಗಳ ಮೇಲೆ ನಿಗಾವಹಿಸಿರುವ ಚುನಾವಣಾ ಆಯೋಗವು ಮಂಗಳವಾರ 3.24 ಕೋಟಿ ರು. ನಗದನ್ನು ವಶಪಡಿಸಿಕೊಂಡಿದೆ. ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ 67.54 ಲಕ್ಷ ರು.ಮೌಲ್ಯದ 1.448 ಕೆಜಿ ಚಿನ್ನ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 1.49 ಕೋಟಿ ರು. ಮೌಲ್ಯದ ಮೂರು ಕೆಜಿಗಿಂತ ಹೆಚ್ಚು ಚಿನ್ನ, ಶಾಂತಿನಗರ ಕ್ಷೇತ್ರದಲ್ಲಿ 4.79 ಕೋಟಿ ರು. ಮೌಲ್ಯದ 7.999 ಕೆಜಿ ಚಿನ್ನವನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ಜಿಲ್ಲೆಯಲ್ಲಿ 30 ಲಕ್ಷ ರು. ನಗದು, ರಾಮನಗರ ಕ್ಷೇತ್ರದಲ್ಲಿ 1.97 ಕೋಟಿ ರು. ನಗದು ಮತ್ತು ಮಹದೇವಪುರ ಕ್ಷೇತ್ರದಲ್ಲಿ 26.62 ಲಕ್ಷ ರು. ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Latest Videos

undefined

ಕಾಂಗ್ರೆಸ್‌ನ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಿ: ಜೆ.ಪಿ.ನಡ್ಡಾ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 75.17 ಕೋಟಿ ರು. ನಗದು, 19.04 ಕೋಟಿ ರು. ಮೌಲ್ಯದ ಉಚಿತ ಕೊಡುಗೆಗಳನ್ನು ಜಪ್ತಿ ಮಾಡಲಾಗಿದೆ. 40.93 ಕೋಟಿ ರು. ಮೌಲ್ಯದ 9.82 ಲಕ್ಷ ಲೀಟರ್‌ ಮದ್ಯ, 15.19 ಕೋಟಿ ರು. ಮೌಲ್ಯದ 908.41 ಕೆಜಿ ಮಾದಕ ವಸ್ತುಗಳು, 33.61 ಕೋಟಿ ರು. ಮೌಲ್ಯದ 75.30 ಕೆಜಿ ಚಿನ್ನ, 36.82 ಕೋಟಿ ರು. ಮೌಲ್ಯದ 530 ಕೆಜಿ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈವರೆಗೆ ನಗದು ಸೇರಿದಂತೆ 187.17 ಕೋಟಿ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸದ ಕುಮಾರಸ್ವಾಮಿ: ಸಿ.ಪಿ.ಯೋಗೇಶ್ವರ್‌

1,550 ಎಫ್‌ಐಆರ್‌, 69,104 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಿಗೆ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 4253 ಪ್ರಕರಣಗಳನ್ನು ದಾಖಲಿಸಲಾಗಿದೆ. 6,468 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 10,817 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದೆ.

click me!