
ತರಣ್ ತರಣ್(ಏ.07): ಮಗಳು ತಮ್ಮ ಇಚ್ಛೆಗೆ ವಿರೋಧದ ಮದುವೆಯಾಗಿದ್ದಕ್ಕೆ ಕೋಪಗೊಂಡ ಹೆತ್ತವರು, ವರನ ತಾಯಿಯನ್ನು ಅರೆಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಪಂಜಾಬ್ ರಾಜ್ಯದ ತರಣ್ ತರಣ್ ಜಿಲ್ಲೆಯ ವಲ್ಲೋಹಾ ಗ್ರಾಮದಲ್ಲಿ ನಡೆದಿದೆ.
55 ವರ್ಷದ ಮಹಿಳೆಯನ್ನು ಅರೆ ನಗ್ನಗೊಳಿಸಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ವೈರಲ್ ಆಗಿದೆ.
ಪಶ್ಚಿಮ ಬಂಗಾಳದಲ್ಲಿ ಸಾಧುಗಳ ನಗ್ನಗೊಳಿಸಿ ಭೀಕರ ಹಲ್ಲೆ
ಕೆಲ ದಿನಗಳ ಹಿಂದಷ್ಟೆ ಸಂತ್ರಸ್ತೆಯ ಮಗ ಯುವತಿಯೊಬ್ಬಳ ಪ್ರೀತಿಸಿ ಮದುವೆಯಾಗಿದ್ದ. ಆದರೆ ಈ ಮದುವೆ ವಧುವಿನ ಕುಟುಂಬದವರಿಗೆ ಇಷ್ಟವಿರಲಿಲ್ಲ. ಆ ಸಿಟ್ಟನ್ನು ವರನ ತಾಯಿಯ ಮೇಲೆ ತೋರಿಸಿಕೊಂಡಿದ್ದಾರೆ. ಘಟನೆ ಸಂಬಂಧ ಸಂತ್ರಸ್ತ ಮಹಿಳೆ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, 'ಪಂಜಾಬ್ ಯಾವುದೇ ಬಂಗಾಳಕ್ಕೆ ಕಡಿಮೆ ಇಲ್ಲ' ಎಂದು ಕಿಡಿಕಾರಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ