ಮದುವೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನ ಮೇಲೆ ಗುಂಡಿನ ದಾಳಿ

Published : Dec 08, 2020, 05:06 PM IST
ಮದುವೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನ ಮೇಲೆ ಗುಂಡಿನ ದಾಳಿ

ಸಾರಾಂಶ

ಮದುವೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನ ಮೇಲೆ ಗುಂಡಿನ ದಾಳಿ/  ಗುಂಡಿನ ದಾಳಿ ಮಾಡಿ ಪರಾರಿಯಾದ ಅಪರಿಚಿತರು/ ಘಟನೆಗೆ ಕಾರಣ ಹುಡುಕುತ್ತಿರುವ ಪೊಲೀಸರು/ ರಾಜಧಾನಿ ದೆಹಲಿ ಹೊರವಲಯದಲ್ಲಿ ಘಟನೆ

ನವದೆಹಲಿ (ಡಿ. 08)  ಮದುವೆಗೆ ಮೂರು ದಿನ ಇದ್ದಾಗ ವರನ ಮರ್ಮಾಂಗವನ್ನೇ ಕತ್ತರಿಸಿದ್ದ ಸುದ್ದಿಯನ್ನು ನೋಡಿದ್ದೇವು.  ಕಮದುವೆ ಮೆರವಣಿಗೆ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ವರನ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾನೆ.

ಹೊರಗಿನ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ವಿವಾಹ ಮೆರವಣಿಗೆಯಲ್ಲಿ 27 ವರ್ಷದ ವರನ ಮೇಲೆ ಗುಂಡಿನ ದಾಳಿಯಾಗಿದೆ. ಗಂಭೀರ ಗಾಯಗೊಂಡಿದ್ದ ವರ ರಾಮನ್ ಗೆ ಚಿಕಿತ್ಸೆ ನೀಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

ಮದುವೆಗೆ ಮೂರು ದಿನ ಇದ್ದಾಗ ವರನ ಮರ್ಮಾಂಗವನ್ನೇ ಕತ್ತರಿಸಿದ ಫ್ರೆಂಡ್ಸ್

ದೆಹಲಿ  ಹೊರವಲಯದ  ಹಿರಾನ್ ಕುಡ್ನಾ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು  ಮೆರವಣಿಗೆ ರಥದಲ್ಲಿ ಕುಳಿತಿದ್ದ ವರನ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ.

ಸಂಬಂಧಿಕರು ಹಲ್ಲೆಕೋರರನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.  ಘಟನೆಗೆ ಏನು ಕಾರಣ ಎಂಬುದನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?