ವಿದ್ಯಾರ್ಥಿನಿಯರಿಗೆ ಅಸಭ್ಯ ಸಂದೇಶ ಕಳುಹಿಸಿ ರಿಸೈನ್‌ ಮಾಡಿದ ಅತಿಥಿ ಉಪನ್ಯಾಸಕ

Published : Jun 29, 2022, 09:04 PM IST
ವಿದ್ಯಾರ್ಥಿನಿಯರಿಗೆ ಅಸಭ್ಯ ಸಂದೇಶ ಕಳುಹಿಸಿ ರಿಸೈನ್‌ ಮಾಡಿದ ಅತಿಥಿ ಉಪನ್ಯಾಸಕ

ಸಾರಾಂಶ

*  ತಪ್ಪೊಪ್ಪಿಕೊಂಡು ರಾಜೀನಾಮೆ ನೀಡಿದ ಸಿದ್ದಪ್ಪ ಕಂಬಳಿ ಕಾನೂನು ಕಾಲೇಜಿನ ಡಾ. ಶೇಷಗಿರಿ *  ವಿದ್ಯಾರ್ಥಿನಿಯರ ವಾಟ್ಸ್‌ಆ್ಯಪ್‌ಗೆ ನೈಸ್‌, ಸೂಪರ್‌ ಎಂದೆಲ್ಲ ಕಮೆಂಟ್‌ ಮಾಡುತ್ತಿದ್ದ ಅತಿಥಿ ಉಪನ್ಯಾಸಕ *  ವಿದ್ಯಾರ್ಥಿನಿಯರು ಸಂಘಟನೆಗಳ ಮೊರೆ ಹೋಗಿರುವುದು ಪ್ರಾಚಾರ್ಯರಿಗೆ ಅಸಮಾಧಾನ ತಂದಂತಿದೆ  

ಧಾರವಾಡ(ಜೂ.29): ಸರ್‌ ಸಿದ್ದಪ್ಪ ಕಂಬಳಿ ಕಾನೂನು ಕಾಲೇಜಿನ ಅರ್ಥಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕ ಡಾ. ಶೇಷಗಿರಿ ವಿದ್ಯಾರ್ಥಿನಿಯರ ಮೊಬೈಲ್‌ಗೆ ವಾಟ್ಸ್‌ಆ್ಯಪ್‌ ಮೂಲಕ ಅಸಭ್ಯ ಸಂದೇಶಗಳನ್ನು ಕಳುಹಿಸಿದ ಪರಿಣಾಮ ಬಹಿರಂಗವಾಗಿ ತಪ್ಪೊಪ್ಪಿಕೊಂಡು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿದ್ಯಾರ್ಥಿನಿಯರ ವಾಟ್ಸ್‌ಆ್ಯಪ್‌ ಸ್ಟೇಟಸ್‌ಗೆ ಆರಂಭದಲ್ಲಿ ನೈಸ್‌, ಸೂಪರ್‌ ಎಂದೆಲ್ಲ ಕಮೆಂಟ್‌ ಮಾಡುತ್ತಿದ್ದ ಶೇಷಗಿರಿ, ಬಳಿಕ ತೀರಾ ಅತಿರೇಕದ ಮೆಸೇಜ್‌ಗಳನ್ನು ಕಳುಹಿಸಿದ್ದಾನೆ. ಇದರಿಂದ ರೋಸಿ ಹೋದ ವಿದ್ಯಾರ್ಥಿನಿಯರು ಈ ಸಂಗತಿಯನ್ನು ಕರ್ನಾಟಕ ರಾಜ್ಯ ಕಾನೂನು ವಿದ್ಯಾರ್ಥಿಗಳ ಸಂಘಟನೆ ಗಮನಕ್ಕೆ ತಂದಿದ್ದಾರೆ. ಸಂಘಟನೆಯವರು ವಿಷಯ ತಿಳಿದು ಕಾಲೇಜಿಗೆ ಹೋಗಿ ಈ ಬಗ್ಗೆ ಕೇಳುತ್ತಿದ್ದಂತೆಯೇ ಶೇಷಗಿರಿ ತನ್ನ ತಪ್ಪು ಒಪ್ಪಿಕೊಂಡಿದ್ದಾನೆ. ಜತೆಗೆ ತನ್ನ ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದಾನೆ.

Hubli Crime News: ಕಾರ್ಪೋರೆಟರ್ ಹತ್ಯೆಗೆ ಪತಿಯಿಂದಲೇ ಯತ್ನ: ದೂರು ದಾಖಲು

ಈ ಸಂಗತಿ ಕಾಲೇಜು ಪ್ರಾಚಾರ್ಯರ ಗಮನಕ್ಕಿಲ್ಲ. ಆದರೆ, ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಾಚಾರ್ಯ ಡಾ. ಶರತ್‌ ಬಾಬು, ಶೇಷಗಿರಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರ ವಾಟ್ಸ್‌ಆ್ಯಪ್‌ ಸಂದೇಶಕ್ಕೆ ಸಂಬಂ​ಧಿಸಿದಂತೆ ಈ ವರೆಗೂ ತಮಗೆ ದೂರು ಬಂದಿಲ್ಲ ಎನ್ನುತ್ತಾರೆ. ತಮ್ಮ ಬಳಿ ದೂರನ್ನು ಹೇಳಿಕೊಳ್ಳಬೇಕಿದ್ದ ವಿದ್ಯಾರ್ಥಿನಿಯರು ನೇರವಾಗಿ ಸಂಘಟನೆಗಳ ಮೊರೆ ಹೋಗಿರುವುದು ಸಹ ಪ್ರಾಚಾರ್ಯರಿಗೆ ಅಸಮಾಧಾನ ತಂದಂತಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ