
ರಾಯಚೂರು(ನ.25): ವಿದ್ಯಾರ್ಥಿನಿಯನ್ನ ಪುಸಲಾಯಿಸಿಕೊಂಡು ಹೋಗಿದ್ದ ಅತಿಥಿ ಶಿಕ್ಷಕನನ್ನ ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಘಟನೆ ನಡೆದಿದೆ. ಪಾಲೇಶ ಎಂಬಾತನೇ ಬಂಧಿತ ಅತಿಥಿ ಶಿಕ್ಷಕನಾಗಿದ್ದಾನೆ.
ಬಂಧಿತ ಅತಿಥಿ ಶಿಕ್ಷಕ ಪಾಲೇಶ 13 ವರ್ಷದ ಅಪ್ರಾಪ್ತೆಯನ್ನ ಪುಸಲಾಯಿಸಿ ಎರಡ್ಮೂರು ದಿನಗಳ ಕಾಲ ಕರೆದುಕೊಂಡು ಹೋಗಿದ್ದನು ಅಂತ ಆರೋಪಿಸಲಾಗಿದೆ.
ವಿಜಯಪುರ: ಸಾಲದ ಹೆಸ್ರಲ್ಲಿ ವಿಡಿಸಿಸಿ ಬ್ಯಾಂಕ್‌ನಲ್ಲಿ ಮಹಾಮೋಸ..!
ಈ ಸಂಬಂಧ ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದೂರ ದಾಖಲಾಗಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ