
ಬೆಂಗಳೂರು(ಡಿ.26): ಮದ್ಯವ್ಯಸನಿಯಾಗಿದ್ದ ಜಿಮ್ ತರಬೇತುದಾರನೊಬ್ಬ ನಾಲ್ಕು ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡದ ಟೆರೆಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರಳೂರು- ಸರ್ಜಾಪುರ ಮುಖ್ಯರಸ್ತೆಯ ಅಪಾರ್ಟ್‌ಮೆಂಟ್ ನಿವಾಸಿ ಗಣೇಶ್ ಪಾಂಡ(32) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದೆ.
ಒಡಿಸ್ಸಾ ಮೂಲದ ಗಣೇಶ್ ಪಾಂಡ ಮೂರು ವರ್ಷದ ಹಿಂದೆ ಬೆಂಗಳೂರಿಗೆ ಬಂದು ಜಿಮ್ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದರು. ಹರಳಸೂರು ಸರ್ಜಾಪುರ ರಸ್ತೆಯಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿರುವ ಅಕ್ಕ-ಬಾವನ ಜತೆಗೆ ನೆಲೆಸಿದ್ದರು. ಇತ್ತೀಚೆಗೆ ವಿಪರೀತ ಮದ್ಯ ಸೇವಿಸುತ್ತಿದ್ದರು. ಮದ್ಯ ಬಿಡಿಸಲು ಅಕ್ಕ-ಬಾವ ಸಾಕಷ್ಟು ಪ್ರಯತ್ನಿಸಿದ್ದರು. ಆದರೂ ಆವರನ್ನು ಮದ್ಯದ ಚಟದಿಂದ ಬಿಡಿಸಲು ಸಾಧ್ಯವಾಗಿರಲಿಲ್ಲ ಎಂದು ತಿಳಿದು ಬಂದಿದೆ.
ಅನೈತಿಕ ಸಂಬಂಧದ ಆರೋಪ; ಮರ್ಯಾದೆಗಂಜಿ ನೇಣುಬಿಗಿದು ಯುವಕ ಆತ್ಮಹತ್ಯೆ!
ಭಾನುವಾರ ರಾತ್ರಿ ಅಕ್ಕ-ಬಾವನ ಜತೆಗೆ ಊಟ ಮಾಡಿ ಟೆರಸ್‌ಗೆ ತೆರಳಿದ್ದರು. ಬಳಿಕ ಏಕಾಏಕಿ ಕೆಳಗೆ ಜಿಗಿದಿದ್ದಾರೆ. ಇದರಿಂದ ತಲೆ, ಕೈ-ಕಾಲುಗಳಿಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಗಣೇಶ ಪಾಂಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರವೂ ಸಿಕ್ಕಿಲ್ಲ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ