ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಜಯನಗರ ಮೂಲದ ವಿವಾಹಿತೆ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ!

By Gowthami K  |  First Published Jul 5, 2024, 4:05 PM IST

ಗಂಡ ಮತ್ತು ಮನೆಯವರ ವರದಕ್ಷಿಣ ಕಿರುಕುಳಕ್ಕೆ ಬೇಸತ್ತು  ವಿವಾಹಿತೆ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ವಿಜಯನಗರ ಮೂಲದಾಕೆ ಎಂದು ತಿಳಿದುಬಂದಿದೆ. 


ಬೆಂಗಳೂರು (ಜು.5): ಗಂಡ ಮತ್ತು ಮನೆಯವರ ವರದಕ್ಷಿಣ ಕಿರುಕುಳಕ್ಕೆ ಬೇಸತ್ತು  ವಿವಾಹಿತೆ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಗಂಗಮ್ಮನ ಗುಡಿ ಮುಖ್ಯ ರಸ್ತೆ ಮನೆಯಲ್ಲಿ ಘಟನೆ ನಡೆದಿದೆ.

ಕಾರಿನ ಶೆಡ್‌ ಬಳಿ ಅಜಿತ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಹಂತಕರಿಗೆ ದರ್ಶನ್ ಕರಿಯ ಸಿನಿಮಾ ಸ್ಪೂರ್ತಿ!

Tap to resize

Latest Videos

undefined

ಮೂಲತಃ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಪೂಜಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ. ಪತಿ ಸುನೀಲ್ ಹಾಗೂ ಮೈದುನಾ ಅನಿಲ್ ವಿರುದ್ದ ಯುವತಿ ಪೋಷಕರು ಆರೋಪ ಮಾಡಿದ್ದಾರೆ. 2022 ರಲ್ಲಿ ಮಗಳನ್ನು ಪೋಷಕರು ಸುನೀಲ್ ಎಂಬಾತನಿಗೆ ವಿವಾಹ ಮಾಡಿ ಕೊಟ್ಟಿದ್ದರು.

ರಾಜ್ಯದಲ್ಲಿ ಅಧಿಕ ಮಳೆ, ಬತ್ತಿ ಬರಡಾಗಿದ್ದ ತುಂಗಭದ್ರಾ ಸೇರಿ ಎಲ್ಲಾ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳ

ಆತ್ಮಹತ್ಯೆಗೀಡಾದ ಟೆಕ್ಕಿ ಪೂಜಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂಎಸ್ ರಾಮಯ್ಯ ಆಸ್ಪತ್ರೆಗೆ  ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಗಂಗಮ್ಮನ ಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

click me!