ಬಿ.ಸಿ.ರೋಡಿನಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜಡೆಯನ್ನು ಹಿಂದಿನ ಸೀಟ್‌ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಸವರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ರ್ತೆ ಬಂಟ್ವಾಳ (ಮೇ.27) : ಬಿ.ಸಿ.ರೋಡಿನಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜಡೆಯನ್ನು ಹಿಂದಿನ ಸೀಟ್‌ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಸವರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಟೊಪ್ಪಿ ಧರಿಸಿರುವ ವ್ಯಕ್ತಿ ಮಹಿಳೆಯ ಜಡೆಯನ್ನು ಸವರಿದ ವಿಡಿಯೋವನ್ನು ಸಹಪ್ರಯಾಣಿಕರು ಚಿತ್ರೀಕರಣ ಮಾಡಿದ್ದು, ಜಕ್ರಿಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಅಶ್ಲೀಲ ಫೋಟೊ ತೋರಿಸಿ ಮಾನಸಿಕ ಕಿರುಕುಳ ಪ್ರಕರಣ; ಸೈಕೋ ವಿರುದ್ಧ ದೂರು
ನಾವೂರು ನಿವಾಸಿ ಹಮೀದ್ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಇದೀಗ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕದ ತಿರುಲೇಶ್ ಬೆಳ್ಳೂರು ನೀಡಿದ ದೂರಿನಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠಿಣ ಕ್ರಮಕ್ಕೆ ಶಾಸಕರ ಸೂಚನೆ:
ಬಂಟ್ವಾಳ ಶಾಸಕ ರಾಜೇಶ್ ನಾಯ್‌್ಕ(Rajesh naik Bantwal MLA) ಘಟನೆಯ ಕುರಿತು ಶೀಘ್ರವಾಗಿ ಬಂಧಿಸಿ ಅತನ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಂಟ್ವಾಳ ಡಿವೈಎಸ್‌ಪಿ ಅವರಿಗೆ ಸೂಚನೆ ನೀಡಿದ್ದಾರೆ.
ಚಿತ್ರರಂಗದಲ್ಲಿ ಹನ್ಸಿಕಾ ಮೋಟ್ವಾನಿಗೆ ಕಿರುಕುಳ ಕೊಟ್ಟ ಹೀರೋ ಯಾರು?