
ಬೆಂಗಳೂರು (ಏ.7): ಇಬ್ಬರು ಯುವತಿಯರು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹಿಂಬಾಲಿಸಿ ಬಂದ ಕಾಮುಕನೊಬ್ಬ ಯುವತಿಯೊಬ್ಬಳ ಮೇಲೆ ಎರಗಿ ಖಾಸಗಿ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿ ಪರಾರಿ ಆಗಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏ.3ರ ಮುಂಜಾನೆ ಸುಮಾರು 1.55ಕ್ಕೆ ಈ ಘಟನೆ ನಡೆದಿದೆ. ಕಾಮುಕನ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ ಗೌಡ ಎಂಬುವವರು ನೀಡಿದ ದೂರಿನ ಸಂಬಂಧ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿ ಕಾಮುಕನ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ವಿವರ: ಬಾಗಲಕೋಟೆ: ಆಟೋ, ಕಾರು ಆಯ್ತು ಇದೀಗ KSRTC ಬಸ್ಸಿನಲ್ಲೇ ಗೋಮಾಂಸ ಸಾಗಣೆ!
ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏ.3ರ ಮುಂಜಾನೆ ಸುಮಾರು 1.55ಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ ಖಾಸಗಿ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಆ ಯುವತಿಯರು ಜೋರಾಗಿ ಕಿರುಚಿದ ಪರಿಣಾಮ ಆತ ಕಾಲ್ಕಿತ್ತಿದ್ದಾನೆ. ಈ ಘಟನೆಯ ದೃಶ್ಯ ಕಟ್ಟಡವೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:
ಕಿರುಕುಳ ಅನುಭವಿಸಿದ ಯುವತಿಯರು ಘಟನೆ ಸಂಬಂಧ ದೂರು ನೀಡಿಲ್ಲ. ಆದರೆ, ಸ್ಥಳೀಯ ನಿವಾಸಿಯೊಬ್ಬರು ಸುದ್ದಗುಂಟೆಪಾಳ್ಯ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಕಾಮುಕನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ