viral video: ಜಗಳ ಬಿಡಿಸಲು ಹೋದ ಕಾನ್‌ಸ್ಟೇಬಲ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು!

Published : Jun 17, 2023, 10:58 AM ISTUpdated : Jun 17, 2023, 03:46 PM IST
viral video: ಜಗಳ ಬಿಡಿಸಲು ಹೋದ ಕಾನ್‌ಸ್ಟೇಬಲ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು!

ಸಾರಾಂಶ

ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹೊಳೆನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ನಡೆದಿದೆ.

 

ಹಾಸನ (ಜೂ.17) : ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹೊಳೆನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ನಡೆದಿದೆ.

ಯಸಳೂರು ಪೊಲೀಸ್ ಠಾಣೆಯ ಶರತ್ ಗಂಭೀರವಾಗಿ ಕಾನ್ಸ್‌ಟೇಬಲ್.  ಜೂ.15 ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಬಂದಿದ್ದ ಶರತ್. ಈ ವೇಳೆ ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿದ್ದ  ಗ್ರಾಮದ ಯುವಕರ ಗುಂಪು. ಇದನ್ನು ನೋಡಿದ ಶರತ್ ಜಗಳ ಬಿಡಿಸಲು ಮುಂದಾಗಿದ್ದಾನೆ. ಆದರೆ ಯುವಕರ ಗುಂಪು ರೊಚ್ಚಿಗೆದ್ದು ಜಗಳ ಬಿಡಿಸಲು ಬಂದ ಶರತ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಮಿಥುನ್ ಲೋಹಿತ್ ನಟರಾಜು ಸಹಚರರು ಸೇರಿ ಮರಣಾಂತಿಕ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ರೌಡಿಯ ಮಚ್ಚಿನ ಹಿಡಿಕೆ ಏಟಿಗೆ ವ್ಯಕ್ತಿ ಸಾವು

ಏಕಾಏಕಿ ಶರತ್ ಮೇಲೆ ಅಟ್ಯಾಕ್ ಮಾಡಿದ ಗುಂಪು. ಶರತ್ ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ ಇಷ್ಟಕ್ಕೆ ಸುಮ್ಮನಾಗದೆ ನಟರಾಜ ಎಂಬುವವನು ಕಾರಿನಿಂದ ಲಾಂಗ್ ತಂದು ಬೀಸಿದ್ದಾನೆ. ಈ ವೇಳೆ ದಾಳಿಯಿಂದ ತಪ್ಪಿಸಿಕೊಂಡ ಕಾನ್ಸ್‌ಟೇಬಲ್ ಶರತ್ ಕನ್ವೆನ್ಷನ್ ಹಾಲ್ ಒಳಗೆ ಓಡಿ ಹೋಗಿದ್ದಾನೆ. ಆದರೆ ಶರತ್ ಬೆನ್ನಟ್ಟಿದ ದುಷ್ಕರ್ಮಿಗಳು ಕನ್ವೆನ್ಷನ್ ಹಾಲ್‌ಗೆ ನುಗ್ಗಿ ಲಾಂಗ್‌ನಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ.  ಗಂಭೀರ ಗಾಯಗೊಂಡು ಹಾಲ್‌ನಲ್ಲೇ ಕುಸಿದು ಬಿದ್ದ ಕಾನ್ಸ್‌ಟೇಬಲ್ ಶರತ್. ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸದ್ಯ ಗಾಯಾಳುವಿಗೆ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಚಾಲಕನ ಕೊಲೆ ಮಾಡಿ 13 ಟನ್‌ ತಾಮ್ರ ದರೋಡೆ

 ಹಾವೇರಿ: ಲಾರಿ ಚಾಲಕನನ್ನು ಬರ್ಬರವಾಗಿ ಕೊಲೆಗೈದು ಲಾರಿಯಲ್ಲಿ ಸಾಗಿಸುತ್ತಿದ್ದ ಕೋಟ್ಯಂತರ ರುಪಾಯಿ ಮೌಲ್ಯದ ತಾಮ್ರವನ್ನು ದರೋಡೆ ಮಾಡಿದ ಘಟನೆ ಶುಕ್ರವಾರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಕಿಗೆ ಬಂದಿದೆ.

ಗೋವಿಂದ ನಾರಾಯಣ ಖಂಡೇಕರ (40) ಕೊಲೆಯಾಗಿರುವ ಚಾಲಕ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀರಜ್‌ನಿಂದ ಚೆನ್ನೈಗೆ ಹೊರಟಿದ್ದ ಲಾರಿಯನ್ನು ದರೋಡೆಕೋರರು ಅಡ್ಡಗಟ್ಟಿನಿಲ್ಲಿಸಿ ಚಾಲಕನ ತಲೆ, ಕುತ್ತಿಗೆ ಭಾಗಕ್ಕೆ ಹರಿತವಾದ ಆಯುಧದಿಂದ ಹೊಡೆದು ಬರ್ಬರವಾಗಿ ಕೊಲೆಗೈದು ಸಮೀಪದ ಹೆದ್ದಾರಿ ಪಕ್ಕದಲ್ಲಿ ಎಸೆದಿದ್ದಾರೆ. ನಂತರ ಲಾರಿಯಲ್ಲಿ ಸಾಗಿಸುತ್ತಿದ್ದ ಕೋಟ್ಯಂತರ ರುಪಾಯಿ ಮೌಲ್ಯದ 13 ಟನ್‌ ತಾಮ್ರವನ್ನು ಮತ್ತೊಂದು ಲಾರಿಗೆ ಹೇರಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ರಮ ಮರಳುಗಾರಿಕೆಗೆ ಪಿಸಿ ಬಲಿ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರೀಯೆ

ದರೋಡೆಕೋರರು ಎಷ್ಟುಜನರಿದ್ದರು? ಇಲ್ಲಿಯೇ ಕೊಲೆ ಮಾಡಿದ್ದಾರೆಯೇ, ಅಥವಾ ಬೇರೊಂದು ಕಡೆ ಹತ್ಯೆ ಮಾಡಿ ಇಲ್ಲಿ ತಂದು ಎಸೆಯಲಾಗಿದೆಯೇ ಎಂಬ ಕುರಿತು ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ. ಈವರೆಗೂ ದರೋಡೆಕೋರರ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಾವೇರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!