ಗಂಡು ಮೆಟ್ಟಿದ ನಾಡು ಹುಬ್ಬಳ್ಳಿ- ಧಾರವಾಡದ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಹಾಸನ ಜಿಲ್ಲೆ ಮೂಲದ ಮೂವರು ಸಾವನ್ನಪ್ಪಿದ್ದಾರೆ.
ಧಾರವಾಡ (ಜೂ.11): ರಾಜ್ಯದ ಗಂಡು ಮೆಟ್ಟಿದ ನಾಡು ಎಂದೇ ಪ್ರಸಿದ್ಧಿಯಾಗಿರುವ ಹುಬ್ಬಳ್ಳಿ- ಧಾರವಾಡದ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ಹಾಸನ ಜಿಲ್ಲೆ ಮೂಲದ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಮೈಸೂರು ಅಫಘಾತ ಮಾಸುವ ಮುನ್ನವೇ ಹಲವು ಅಪಘಾತಗಳು ಮರುಕಳಿಸುತ್ತಲೇ ಇವೆ. ಮೈಸೂರಿನ ಟಿ. ನರಸೀಪುರದಲ್ಲಿ ಕಾರು ಹಾಗೂ ಬಸ್ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದರು. ಆದರೆ, ಭಾನುವಾರ ಬೆಳ್ಳಂಬೆಳಗ್ಗೆ ಧಾರವಾಡದ ಬೈಪಾಸ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿ-ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ಇಬ್ಬರ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿದಾಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
undefined
ಒಡಿಶಾ ರೈಲು ಅಪಘಾತದಲ್ಲಿ ಜೀವ ಉಳಿದರೂ, ವಾಪಸ್ ಮನೆಗೆ ಬರುವ ಮೊದಲೇ ಪ್ರಾಣ ಹೋಯ್ತು
ಹಾಸನ ಮೂಲದವರ ಸಾವು: ರಾಷ್ಟ್ರೀಯ ಹೆದ್ದಾರಿ 4ರ ಹಳಿಯಾಳ ಸೇತುವೆ ಬಳಿ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಬಿಂದುಗೌಡ (35), ಬಾಪುಗೌಡ (36) ಮೃತ ವ್ಯಕ್ತಿಗಳು ಎಂದು ತಿಳಿದುಬಂದಿದೆ. ಆದರೆ, ಇನ್ನೋರ್ವ ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರನ್ನು ಹಾಸನ ಹಾಗೂ ಮೈಸೂರು ಜಿಲ್ಲೆಯ ಮೂಲದ ವ್ಯಕ್ತಿಗಳು ಎಂದು ತಿಳಿದುಬಂದಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.
ಕುಡಿದ ಮತ್ತಲ್ಲಿ ಬಾಲಕನ ಮೇಲೆಯೇ ವಾಟರ್ ಟ್ಯಾಂಕರ್ ಹರಿಸಿದ ಚಾಲಕ: ಆನೇಕಲ್: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು ಎಂಬ ನಿಯಮವಿದ್ದರೂ ಇಲ್ಲೊಬ್ಬ ವಾಟರ್ ಟ್ಯಾಂಕರ್ ಅಳವಡಿಸಿದ ಟ್ರ್ಯಾಕ್ಟರ್ ಚಾಲಕ ಕುಡಿದ ಮತ್ತಿನಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡಿದ್ದಲ್ಲದೇ ಬಾಲಕನ ಮೇಲೆ ಟ್ಯಾಂಕರ್ ಹರಿಸಿ ಬಾಲಕನ ಸಾವಿಗೆ ಕಾರಣವಾಗಿದ್ದಾನೆ. ಕುಡಿದ ಮುತ್ತಿನಲ್ಲಿ ಟ್ರ್ಯಾಕ್ಟರ್ ವಾಟರ್ ಟ್ಯಾಂಕರ್ ಚಾಲನೆ ಬಾಲಕ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಿ.ಕೆ. ಪಾಳ್ಯದಲ್ಲಿ ಬುಧವಾರ ನಡೆದಿದೆ. ಬೇಸಿಗೆಯ ಹಿನ್ನೆಯಲ್ಲಿ ಮನೆಗಳಿಗೆ ನೀರು ಸರಬರಾಜು ಮಾಡುವುದಕ್ಕೆ ವಾಟರ್ ಟ್ಯಾಂಕರ್‌ಗಳ ಹಾವಳಿ ಹೆಚ್ಚಾಗಿರುತ್ತದೆ. ಪ್ರತಿನಿತ್ಯ ಟ್ಯಾಂಕರ್ ನೀರು ಸರಬರಾಜು ಮಾಡಲು ನಾಮುಂದು- ತಾಮುಂದು ಎಂದು ಪೈಪೋಟಿಗೆ ಬಿದ್ದು ನೀರು ಸರಬರಾಜು ಮಾಡುವ ಟ್ಯಾಂಕರ್‌ಗಳು ಆಗಿಂದಾಗ್ಗೆ ಮನೆಗಳ ಮುಂದೆ ನಿಲ್ಲಿಸಿರುವ ವಾಹಗಳಿಗೆ ಹಾನಿಗೊಳಿಸುತ್ತಿದ್ದವು. ಆದರೆ, ಇಂದು ಟ್ಯಾಂಕರ್ ಚಾಲಕರ ಆರ್ಭಟಕ್ಕೆ ಮಗು ಬಲಿಯಾಗಿದೆ.
Bengaluru ಕುಡಿದ ಮತ್ತಲ್ಲಿ ಬಾಲಕನ ಮೇಲೆಯೇ ವಾಟರ್ ಟ್ಯಾಂಕರ್ ಹರಿಸಿದ ಚಾಲಕ: ಸ್ಥಳದಲ್ಲೇ ಸಾವು
ಐಸ್‌ಕ್ರೀಮ್ ನಂತೆ ಜೀವವೂ ಕರಗಿ ಹೋಯಿತು: ಸಿ ಕೆ ಪಾಳ್ಯದ ನಿವಾಸಿ ಭುವನ್(4) ಮೃತ ಬಾಲಕ ಎಂದು ಗುರುತಿಸಲಾಗಿದೆ. ಅಣ್ಣನ ಜೊತೆ ಬೇಕರಿಯಲ್ಲಿ ಐಸ್ ಕ್ರೀಮ್ ತೆಗೆದುಕೊಂಡು ಬರುವಾಗ ಅಪಘಾತ ಸಂಭವಿಸಿದೆ. ಇನ್ನು ರಸ್ತೆಯಲ್ಲಿ ಬರುತ್ತಿದ್ದ ಬಾಲಕನ ಮೇಲೆ ಟ್ಯಾಂಕರ್ ಹರಿಸಿದ ನಂತರ ಬಾಲಕನ್ನು ರಕ್ಷಣೆ ಮಾಡದೇ ಕೂಡಲೇ ಅಲ್ಲಿಂದ ವಾಟರ್ ಟ್ಯಾಂಕರ್ ಅನ್ನು ಬಿಟ್ಟು ಪರಾರಿಯಾಗಿದ್ದಾನೆ. ತುಂಬಾ ಹೊತ್ತು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಗುವಿನ ಪೋಷಕರು ಬಂದು ಆಸ್ಪತ್ರೆಗೆ ರವಾನಿಸುವ ವೇಳೆಗೆ ಮಗು ಸಾವನ್ನಪ್ಪಿತ್ತು.