ಇಸ್ಲಾಂ ಧರ್ಮದ ಬಗ್ಗೆ ಪ್ರಚೋದನಕಾರಿ ಕಾಮೆಂಟ್ ಮಾಡಿದ ಆರೋಪ ಖಾಸಗಿ ಆಸ್ಪತ್ರೆ ವೈದ್ಯನ ವಿರುದ್ಧ ಉಡುಪಿ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ.
ಉಡುಪಿ (ಜು.16): ಇಸ್ಲಾಂ ಧರ್ಮದ ಬಗ್ಗೆ ಪ್ರಚೋದನಕಾರಿ ಕಾಮೆಂಟ್ ಮಾಡಿದ ಆರೋಪ ಖಾಸಗಿ ಆಸ್ಪತ್ರೆ ವೈದ್ಯನ ವಿರುದ್ಧ ಉಡುಪಿ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ.
ಬ್ರಹ್ಮಾವರ ಖಾಸಗಿ ಆಸ್ಪತ್ರೆ ವೈದ್ಯ ಡಾ ಕೀರ್ತನ್ ಉಪಾಧ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈತ ತನ್ನ ಎಕ್ಸ್ ಖಾತೆಯಲ್ಲಿ ಕೋಮು ಭಾವನೆ ಕೆರಳಿಸುವ ಉದ್ದೇಶದಿಂದ ಸಂದೇಶ ಹಾಕಿದ್ದಾನೆಂದು ಆರೋಪಿಸಲಾಗಿದೆ. ಸೋಷಿಯಲ್ ಮೀಡಿಯಾಗಳಲ್ಲಿ ವೈದ್ಯನ ಕಾಮೆಂಟ್ ಸ್ಕ್ರೀನ್ ಶಾಟ್ ವೈರಲ್ ಆಗಿದೆ. ಈ ಕಾಮೆಂಟ್ ಬಗ್ಗೆ ವ್ಯಾಪಕ ಟೀಕೆ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು.
undefined
ಬಿಎಂಟಿಸಿ ಬಸ್‌ಗೆ ಬೆಂಕಿ ಬೀಳಲು ಬಾಂಬ್ ಕಾರಣ: ಜಾಲತಾಣದಲ್ಲಿ ವೈರಲ್!
ಎಕ್ಸ್‌ನಲ್ಲಿ ಏನಿದೆ?
'ಈ ಜಗತ್ತಿನಲ್ಲಿ ಏನನ್ನಾದರೂ ಇಲ್ಲವಾಗಿಸುವುದಾದರೆ ಅದು ಯಾವುದು ಹೇಳು?' ಎಂದು ಕೇಳಿದ್ದ ಪ್ರಶ್ನೆಗೆ ವೈದ್ಯ ಡಾ. ಉಪಾಧ್ಯ, 'ಮುಸ್ಲಿಂ ಸಮುದಾಯ' ಎಂದು ಕಾಮೆಂಟ್ ಮಾಡಿದ್ದಾನೆ. ಈ ಕಾಮೆಂಟ್ ಗೆ ಸೋಷಿಯಲ್ ಮೀಡಿಯಾಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕೋಮುಭಾವನೆ ಕೆರಳಿಸುವ ಉದ್ದೇಶದಿಂದಲೇ ಕಾಮೆಂಟ್ ಮಾಡಿದ್ದಾನೆ. ಕೂಡಲೇ ಬಂಧಿಸುವಂತೆ ಆಗ್ರಹ ಕೇಳಿಬಂದ ಹಿನ್ನೆಲೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನ ಪೊಲೀಸ್ ಉಪ ನಿರೀಕ್ಷಕ ಅಜ್ಮಲ್ ಇಬ್ರಾಹಿಂ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ವಿವಾದವಾಗುತ್ತಿದ್ದಂತೆ ಪೋಸ್ಟ್ ಡಿಲಿಟ್ ಮಾಡಿರುವ ವೈದ್ಯ. ಆದರೆ ಕ್ರಮ ಜರುಗಿಸುವಂತೆ ಒತ್ತಾಯಿಸಿರುವ ಸಮುದಾಯ.