Haveri: 'ಓದಿಕೊ' ಎಂದಿದ್ದಕ್ಕೆ ಮನನೊಂದ SSLC ವಿದ್ಯಾರ್ಥಿನಿ ದುರಂತ ಅಂತ್ಯ!

Published : Feb 11, 2026, 07:41 AM IST
Haveri Class 10 Student Ends Life Incident Occurred After Parental Advice

ಸಾರಾಂಶ

ಹಾವೇರಿ ಜಿಲ್ಲೆಯ ಮರೋಳ ಗ್ರಾಮದಲ್ಲಿ, ಪರೀಕ್ಷೆಯ ಒತ್ತಡ ಮತ್ತು ಪೋಷಕರ ಬುದ್ಧಿಮಾತಿನಿಂದ ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.

ಹಾವೇರಿ (ಫೆ.11): ಪರೀಕ್ಷೆಯ ಒತ್ತಡ, ಪೋಷಕರ ಹಿತನುಡಿಯನ್ನೇ ತಪ್ಪಾಗಿ ಭಾವಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಮರೋಳ ಗ್ರಾಮದಲ್ಲಿ ನಡೆದಿದೆ. ನಿಂಗಮ್ಮ ಬಾಲಣ್ಣನವರ (16) ಮೃತಪಟ್ಟ ದುರ್ದೈವಿ.

ಪೋಷಕರ ಬುದ್ಧಿಮಾತಿಗೆ ಮನನೊಂದ ಬಾಲಕಿ

ಮೃತ ಬಾಲಕಿ ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿವೆ, ಸಮಯ ವ್ಯರ್ಥ ಮಾಡದೆ ಸರಿಯಾಗಿ ಓದಿಕೊ ಎಂದು ಪೋಷಕರು ಬುದ್ಧಿ ಹೇಳಿದ್ದರು ಎನ್ನಲಾಗಿದೆ. ಪೋಷಕರು ಪದೇ ಪದೆ ಓದಿನ ಬಗ್ಗೆ ಒತ್ತಡ ಹೇರಿದ್ದರಿಂದ ಮನನೊಂದ ಬಾಲಕಿ, ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ವಿಷ ಸೇವಿಸಿದ್ದಾಳೆ.

ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಸಾವು

ವಿಷ ಸೇವಿಸಿದ ಬಾಲಕಿಯನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಗಮನಿಸಿ:

ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ದುಡುಕಿನಿಂದ ಆ8ಹತ್ಯೆಯ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗೆ ಯಾವುದೇ ಪರಿಹಾರ ಸಿಗಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಸ್ವಯಂಹಾನಿ ಮಾಡಿಕೊಳ್ಳುವ ಯೋಚನೆ/ಮನೋವ್ಯಥೆ ಅನುಭವಿಸುತ್ತಿದ್ದರೆ ಅಥವಾ ಸಂಕಷ್ಟದ ಸ್ಥಿತಿಯಲ್ಲಿದ್ದರೆ, ದಯವಿಟ್ಟು ಯಾರೊಂದಿಗಾದರೂ ಮಾತನಾಡಿ, ಅದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಕರ್ನಾಟಕದಲ್ಲಿ ಸಹಾಯ ಮತ್ತು ಸಮಾಲೋಚನೆಗಾಗಿ ಕೆಳಗಿನ ಸೇವೆಗಳು ಲಭ್ಯವಿವೆ: 24×7 ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿ-ಮಾನಸ್ (Tele-MANAS): 14416 ಅಥವಾ 1800-89-14416 (ರಾಷ್ಟ್ರೀಯ ಟೆಲಿ-ಮಾನಸಿಕ ಆರೋಗ್ಯ ಸೇವೆ). ಇದೆ ಸಂಪರ್ಕಿಸಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಂಗ್ಲಾದಲ್ಲಿ ಹಿಂದು ವ್ಯಾಪಾರಿ ಹತ್ಯೆ
ಬೀದರ್ ಹಾಸ್ಟೆಲ್‌ ನಲ್ಲಿ ವಿಚಿತ್ರ ಆಕೃತಿ ನೋಡಿ ಬೆಚ್ಚಿಬಿದ್ದ ಮಕ್ಕಳು! ವಿದ್ಯಾರ್ಥಿನಿಯರಿಗೆ ಸಾಯಬೇಕೆನ್ನುವ ಕೆಟ್ಟ ಕನಸು!