ನರ್ಸಿಂಗ್ ವಿದ್ಯಾರ್ಥಿನಿ ಅಪಹರಿಸಿ ಇಬ್ಬರಿಂದ ಅತ್ಯಾ*ಚಾರ; ವಿಡಿಯೋ ಮಾಡಿ ನಿರಂತರ ಬೆದರಿಕೆ!

Published : Sep 27, 2025, 07:00 PM IST
Haveri crime Spot Visit

ಸಾರಾಂಶ

ಹಾವೇರಿ ಜಿಲ್ಲೆಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾ*ಚಾರವೆಸಗಿ, ಆ ಕೃತ್ಯದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ.

ಹಾವೇರಿ (ಸೆ.27): ಹಾವೇರಿ ಜಿಲ್ಲೆಯಲ್ಲಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ, ಅತ್ಯಾ*ಚಾರ ಎಸಗಿ, ಬಳಿಕ ಈ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿಗ್ಗಾಂವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಕಳೆದ ಸೆಪ್ಟೆಂಬರ್ 13 ರಂದು ನಡೆದಿದೆ. ನರ್ಸಿಂಗ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್‌ನ ಮೊದಲನೇ ವರ್ಷದಲ್ಲಿ ಓದುತ್ತಿದ್ದ ಸಂತ್ರಸ್ತ ವಿದ್ಯಾರ್ಥಿನಿಯನ್ನು ಇಬ್ಬರು ಯುವಕರು ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದರು.

ಕಾಡಿನಲ್ಲಿ ಎಳೆದೊಯ್ದು ಕೃತ್ಯ:

ಸೆಪ್ಟೆಂಬರ್ 13 ರಂದು ವಿದ್ಯಾರ್ಥಿನಿ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ, ಯುವಕರಿಬ್ಬರು ಅವಳನ್ನು ಕಾರಿನಲ್ಲಿ ಅಪಹರಿಸಿದ್ದಾರೆ. ಅತ್ಯಾ*ಚಾರದ ಬಗ್ಗೆ ಯಾರಿಗೂ ತಿಳಿಸದಂತೆ ತಡೆಯಲು ಬಾಯಿಗೆ ಬಟ್ಟೆ ಕಟ್ಟಿ ಬಲವಂತವಾಗಿ ಅಪಹರಿಸಿ, ನಂತರ ಅವಳನ್ನು ಕಾಡಿನ ಪ್ರದೇಶಕ್ಕೆ ಕರೆದೊಯ್ದು ಅತ್ಯಾ*ಚಾರವೆಸಗಿದ್ದಾರೆ.

ಅತ್ಯಾ*ಚಾರವೆಸಗಿದ ಬಳಿಕ, ಈ ಪಾಪಿಗಳು ವಿದ್ಯಾರ್ಥಿನಿಯ ಮೇಲೆ ಮತ್ತೊಂದು ಅತಿ ಹೇಯ ಕೃತ್ಯಕ್ಕೆ ಮುಂದಾಗಿದ್ದಾರೆ. ಅವರು ವಿದ್ಯಾರ್ಥಿನಿಯ ಅಸಹಾಯಕತೆಯ ವಿಡಿಯೋವನ್ನು ಮಾಡಿದ್ದು, ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ಭಯಭೀತರಾದ ಸಂತ್ರಸ್ತ ಯುವತಿ ಆರಂಭದಲ್ಲಿ ಮೌನಕ್ಕೆ ಶರಣಾಗಿದ್ದಳು.

ಓರ್ವ ಆರೋಪಿ ಬಂಧನ, ಇನ್ನೊಬ್ಬನಿಗಾಗಿ ಶೋಧ:

ಆದರೆ, ನಂತರ ಮನಸ್ಸು ಮಾಡಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನನ್ವಯ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಹರಣ ಮತ್ತು ಅತ್ಯಾ*ಚಾರ ಎಸಗಿದ ಆರೋಪಿಗಳನ್ನು ಅಭಿಷೇಕ್ ಲಮಾಣಿ ಮತ್ತು ಪ್ರವೀಣ ಲಮಾಣಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ತಡಸ ಪೊಲೀಸರು, ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಅಭಿಷೇಕ್ ಲಮಾಣಿ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ಆರೋಪಿ ಪ್ರವೀಣ ಲಮಾಣಿ ಬಂಧನಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ ಮತ್ತು ಆತನ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ವಿದ್ಯಾರ್ಥಿನಿಯನ್ನು ಅಪಹರಿಸಿ ಈ ಕೃತ್ಯ ಎಸಗಿದ ಈ ಘಟನೆ ಹಾವೇರಿ ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕಾಲೇಜಿಗೆ ತೆರಳುವ ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಉಂಟಾಗಿದೆ. ಅತ್ಯಾ*ಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಾನೂನು ಪ್ರಕಾರ ಆರೋಪಿಗಳ ವಿರುದ್ಧ ಸೂಕ್ತ ಮತ್ತು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!