ಸ್ವಂತ ಜ್ಯುವೆಲರಿ ಅಂಗಡಿ ತೆರೆಯಲು ಕೆಲಸಕ್ಕಿದ್ದಮಳಿಗೆಯಲ್ಲಿ ಚಿನ್ನ ಕದ್ದ ಭೂಪ!

Published : Jul 20, 2024, 05:46 AM ISTUpdated : Jul 20, 2024, 10:04 AM IST
ಸ್ವಂತ ಜ್ಯುವೆಲರಿ ಅಂಗಡಿ ತೆರೆಯಲು ಕೆಲಸಕ್ಕಿದ್ದಮಳಿಗೆಯಲ್ಲಿ ಚಿನ್ನ ಕದ್ದ ಭೂಪ!

ಸಾರಾಂಶ

ಸ್ವಂತ ಜ್ಯುವೆಲ್ಲರಿ ಅಂಗಡಿ ಆರಂಭಿಸುವ ಉದ್ದೇಶದಿಂದ ತಾನು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಲ್ಲೇ ಚಿನ್ನಾಭರಣಗಳು-ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ್ದ ಮಾಜಿ ಕೆಲಸಗಾರನನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರು (ಜು.20): ಸ್ವಂತ ಜ್ಯುವೆಲ್ಲರಿ ಅಂಗಡಿ ಆರಂಭಿಸುವ ಉದ್ದೇಶದಿಂದ ತಾನು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಲ್ಲೇ ಚಿನ್ನಾಭರಣಗಳು-ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ್ದ ಮಾಜಿ ಕೆಲಸಗಾರನನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಪ್ರಮೋದ್‌ ಕುಮಾರ್‌(52) ಬಂಧಿತ. ಆರೋಪಿಯಿಂದ ₹20.75 ಲಕ್ಷ ಮೌಲ್ಯದ 300 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ 954 ಗ್ರಾಂ ಬೆಳ್ಳಿ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ.

ಲೋಕಲ್ ಚಪ್ಪಲಿ ಮುಟ್ಟಲ್ಲ, ಬ್ರಾಂಡೆಂಡ್ ಶೂ ಎಲ್ಲೇ ಕಂಡ್ರೂ ಬಿಡೊಲ್ಲ! 7 ವರ್ಷ ಬರೋಬ್ಬರಿ 10 ಸಾವಿರ ಚಪ್ಪಲಿ ಕದ್ದ ಖದೀಮರು!

ಅಶ್ವತ್ಥನಗರದ ಸ್ವಸ್ತಿಕ್ ಜುವೆಲವರಿ(Swastik Jewelery Ashwatthanagar) ಮಾಲೀಕ ಕಾಂತಿಲಾಲ್‌ ನೀಡಿದ ದೂರಿನ ಮೇರೆಗೆ ಸಂಜಯನಗರ ಠಾಣೆ(Sanjayanagar police station) ಇನ್‌ಸ್ಪೆಕ್ಟರ್‌ ಭಾಗ್ಯವತಿ ಕೆ.ಬಂಟಿ ನೇತೃತ್ವದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಪ್ರಕರಣ?:

ದೂರುದಾರ ಕಾಂತಿಲಾಲ್‌ ಅಶ್ವತ್ಥನಗರದಲ್ಲಿ ಸ್ವಸ್ತಿಕ್‌ ಜ್ಯುವೆಲ್ಲರಿ ಅಂಗಡಿ ನಡೆಸುತ್ತಿದ್ದಾರೆ. ಒಂದು ವರ್ಷದ ಹಿಂದೆ ರಾಜಸ್ಥಾನ ಮೂಲದ ಪ್ರಮೋದ್‌ ಕುಮಾರ್‌ನನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ಪ್ರಮೋದ್‌ ಉತ್ತಮವಾಗಿ ಕೆಲಸ ಮಾಡಿ ಮಾಲೀಕರ ನಂಬಿಕೆ ಗಿಟ್ಟಿಸಿದ್ದ. ಹೀಗಾಗಿ ಮಾಲೀಕ ಕಾಂತಿಲಾಲ್‌ ಕೆಲಸದ ಮೇಲೆ ಹೊರಗೆ ಹೋಗುವಾಗಲೆಲ್ಲ ಪ್ರಮೋದ್‌ಗೆ ಜ್ಯುವೆಲ್ಲರಿ ಅಂಗಡಿ ಜವಾಬ್ದಾರಿ ವಹಿಸುತ್ತಿದ್ದರು.

ಕಳೆದ ಮಾರ್ಚ್‌ನಲ್ಲಿ ಯಾರಿಗೂ ಹೇಳದೆ ಪ್ರಮೋದ್‌ ಕೆಲಸ ಬಿಟ್ಟು ನಾಪತ್ತೆಯಾಗಿದ್ದ. ಈ ವೇಳೆ ಮಾಲೀಕ ಕಾಂತಿಲಾಲ್‌(Kantilal Swastik Jewelery owner) ಅಂಗಡಿಯ ಆಭರಣಗಳನ್ನು ಪರಿಶೀಲಿಸಿದಾಗ ಕೆಲವು ಚಿನ್ನಾಭರಣಗಳು ಹಾಗೂ ಬೆಳ್ಳಿ ಸಾಮಾಗ್ರಿಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಮಾಜಿ ಕೆಲಸಗಾರ ಪ್ರಮೋದ್‌ ಬಗ್ಗೆ ಅನುಮಾನಗೊಂಡು ಠಾಣೆಗೆ ದೂರು ನೀಡಿದ್ದರು.

ಕದ್ದ ಚಿನ್ನಾಭರಣ ಮನೆಯಲ್ಲೇ ಬಚ್ಚಿಟ್ಟಿದ್ದ:

ದೂರಿನ ಮೇರೆಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಪ್ರಮೋದ್‌ನನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಚಿನ್ನಾಭರಣ ತಾನೇ ಕಳವು ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಕೊಡಿಗೇಹಳ್ಳಿ ಮನೆಯಲ್ಲಿ ಬಚ್ಚಿಟ್ಟಿದ್ದ ಚಿನ್ನಾಭರಣಗಳು ಹಾಗೂ ಬೆಳ್ಳಿ ಸಾಮಾಗ್ರಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ವಂತ ಜ್ಯುವೆಲ್ಲರಿ ಅಂಗಡಿ ಕನಸು

ರೈಲುಗಳಲ್ಲಿ ಪ್ರಯಾಣಿಕರ ಮೊಬೈಲ್‌, ಚಿನ್ನ ಕದಿಯುತ್ತಿದ್ದ ರೈಲ್ವೆ ಸಿಬ್ಬಂದಿ ಬಂಧನ

ಆರೋಪಿ ಪ್ರಮೋದ್‌ ಕುಮಾರ್‌ ಬಹಳ ವರ್ಷಗಳಿಂದ ಸ್ವಂತ ಜ್ಯುವೆಲ್ಲರಿ ಅಂಗಡಿ ತೆರೆಯುವ ಕನಸು ಕಂಡಿದ್ದ. ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಸುಮ್ಮನಿದ್ದ. ಸ್ವಸ್ತಿಕ್‌ ಜ್ಯುವೆಲ್ಲರಿ ಅಂಗಡಿಗೆ ಕೆಲಸಕ್ಕೆ ಸೇರಿ ಮಾಲೀಕರ ನಂಬಿಕೆಗಿಟ್ಟಿಸಿದ್ದ ಆರೋಪಿ ಪ್ರಮೋದ್‌ ಬಳಿಕ ಮಾಲೀಕರು ಕೆಲಸದ ಮೇಲೆ ಹೊರಗೆ ಹೋದಾಗಲೆಲ್ಲಾ ಒಂದೊಂದೇ ಚಿನ್ನಾಭರಣಗಳನ್ನು ಕಳವು ಮಾಡಿ ಮನೆಯಲ್ಲಿ ಸಂಗ್ರಹಿಸಿದ್ದ. ಕಳೆದ ಮಾರ್ಚ್‌ನಲ್ಲಿ ಯಾರಿಗೂ ತಿಳಿಸದೆ ಕೆಲಸ ಬಿಟ್ಟಿದ್ದ. ಶೀಘ್ರದಲ್ಲೇ ಸ್ವಂತ ಜ್ಯುವೆಲ್ಲರಿ ಅಂಗಡಿ ಆರಂಭಿಸಲು ಸಿದ್ಧತೆ ನಡೆಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್