ಸಹೋದರಿಗೆ ಲೈಂಗಿಕ ಕಿರುಕುಳ ಪ್ರಶ್ನಿಸಿದ ಸಹೋದರನನ್ನೇ ಭೀಕರ ಕೊಲೆಗೈದ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮಸ್ಕಿ: (ಜೂ.25) ಸಹೋದರಿಗೆ ಲೈಂಗಿಕ ಕಿರುಕುಳ ಪ್ರಶ್ನಿಸಿದ ಸಹೋದರನನ್ನೇ ಭೀಕರ ಕೊಲೆಗೈದ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕೊಲೆಯಾದ ಯುವಕ ದೇವರಾಜ (22) ಎಂದು ಗುರುತಿಸಲಾಗಿದೆ. ಲೈಂಗಿಕ ಕಿರುಕುಳ ವಿಚಾರದ ಬಗ್ಗೆ ಎರಡು ಗುಂಪುಗಳ ನಡುವೆ ಮಾರಮಾರಿ ನಡೆದಿತ್ತು ಎನ್ನಲಾಗಿದೆ. ಮೃತ ದೇವರಾಜ ಎನ್ನುವ ಯುವಕನ ಸಹೋದರಿಗೆ ಅದೇ ಗ್ರಾಮದ ಬಸವರಾಜ ಎನ್ನುವ ಯುವಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
undefined
ಲೈಂಗಿಕ ಕಿರುಕುಳಕ್ಕೆ ವಿರೋಧ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ತಳ್ಳಿದ ಐವರು ಕಾಮುಕರು!
ಇದೇ ಕಾರಣಕ್ಕೆ ಪರÜಸ್ಪರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ದೇವರಾಜ ಎನ್ನುವವರಿಗೆ ಚಾಕು ಇರಿಯಲಾಗಿದೆ. ಯುವಕ ದೇವರಾಜ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಘಟನೆಯಲ್ಲಿ ಗಾಯಗೊಂಡ ಇನ್ನೂ ಮೂವರನ್ನು ಮಸ್ಕಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಸ್‌ನಲ್ಲಿ ಮಹಿಳೆ ಜನತೆ ಅನುಚಿತ ವರ್ತನೆ: ವ್ಯಕ್ತಿ ಬಂಧನ
ಪುತ್ತೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಯೊಬ್ಬರೊಂದಿಗೆ ಸಹ ಪ್ರಯಾಣಿಕನೊಬ್ಬ ಅಶ್ಲೀಲವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ನ್ಯಾಯಾಲಯ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.
ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನೇ ಬಂಧಿತನಾಗಿದ್ದ ಆರೋಪಿ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಕನ್ಯಾನ ಕುಕ್ಕಾಜೆ ನಿವಾಸಿ ದೂರು ನೀಡಿರುವ ಮಹಿಳೆ. ಉಪ್ಪಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ ಈತ ಅಶ್ಲೀಲ ವರ್ತನೆ ತೋರಿ, ಕಿರುಕುಳ ನೀಡಿದ್ದ ಎನ್ನಲಾಗಿದೆ.
ಶಾಲಾ ಬಾಲಕಿಯ ಮೈ ಮುಟ್ಟಿದ ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು
ತಾನು ಗುರುವಾರ ತನ್ನ ತಾಯಿಯೊಂದಿಗೆ ಉಪ್ಪಳದಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಆರೋಪಿ ಅಶ್ಲೀಲವಾಗಿ ವರ್ತಿಸಿದ್ದಾನೆ. ಅದನ್ನು ಪ್ರತಿರೋಧಿಸಿ ಪ್ರಶ್ನಿಸುತ್ತಿದ್ದಂತೆಯೇ ಆತ ಬೊಳುವಾರಿನಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದಾನೆ ಎಂದು ದೂರುದಾರೆ ಆರೋಪಿಸಿದ್ದಾರೆ.