ಶಿವಮೊಗ್ಗ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಮತಿ ತಾಲೂಕು ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ, ಹಲ್ಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ನೆರವಾದ ಆರೋಪದಡಿ ಧಾರವಾಡದ ಪತ್ರಕರ್ತ ನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ (ಮಾ.19) : ಶಿವಮೊಗ್ಗ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಮತಿ ತಾಲೂಕು ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ, ಹಲ್ಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ನೆರವಾದ ಆರೋಪದಡಿ ಧಾರವಾಡದ ಪತ್ರಕರ್ತ(Dharwad journlist)ನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಜಿಲ್ಲೆಯ ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಮೆಹಬೂಬ್ ಮುನ್ನವಳ್ಳಿ(Maheboob munnavalli)ಯನ್ನು ನ್ಯಾಮತಿ ಪೊಲೀಸರು(Davanagere police) ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆ ವಿವರ: ಹಂದಿ ಅಣ್ಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಆಂಜನೇಯ ಹಾಗೂ ಮಧು ಬುಧವಾರ ಶಿವಮೊಗ್ಗದ ನ್ಯಾಯಾಲಯಕ್ಕೆ ಬುಧವಾರ ಹಾಜರಾಗಿ, ವಾಪಾಸ್ಸಾಗುತ್ತಿದ್ದ ವೇಳೆ ಸ್ಕಾರ್ಪಿಯೋ ವಾಹನದಲ್ಲಿ ಬಂದಿದ್ದ ತಂಡ ತಲವಾರ್‌ಗಳಿಂದ ದಾಳಿ ಮಾಡಿತ್ತು. ಘಟನೆಯಲ್ಲಿ ಆಂಜನೇಯ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರಗಾಯಗೊಂಡ ಮಧು ಅವರನ್ನು ಶಿವಮೊಗ್ಗ ಮೆಗ್ಗಾನ್‌ಗೆ ದಾಖಲಿಸಲಾಗಿತ್ತು.
undefined
ಶಿವಮೊಗ್ಗದ 2 ಶಂಕಿತ ಉಗ್ರರಿಗೆ 1.5 ಲಕ್ಷ ವಿದೇಶಿ ಕ್ರಿಪ್ಟೋ ಹಣ..!
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಹಾವೇರಿ ಜಿಲ್ಲೆ ಶಿಗ್ಗಾಂವ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ ಪ್ರಕರಣದ ಇತರೆ ಆರೋಪಿಗಳ ಬಗ್ಗೆ ಮಾಹಿತಿ ತಿಳಿದಿದ್ದರೂ ಪೊಲೀಸರ ತನಿಖೆಗೆ ಅಸಹಕಾರ ನೀಡಿ, ಆರೋಪಿಗಳು ತಲೆ ಮರೆಸಿಕೊಳ್ಳಲು ನೆರವಾದ ಆರೋಪದಡಿ ಮೆಹಬೂಬ್‌ನನ್ನು ಬಂಧಿಸಲಾಗಿದೆ.
ಆಂಜನೇಯ ಹತ್ಯೆ, ಮಧು ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುನಿಲ್, ಅಭಿಲಾಷ್, ವೆಂಕಟೇಶ್, ಪವನ್‌ನನ್ನು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡ ಇತರರಿಗಾಗಿ ಶೋಧ ನಡೆಸುತ್ತಿದ್ದಾರೆ.
ನೋಯ್ಡಾದಲ್ಲಿ ಮಹಿಳೆಯ ದೇಹವನ್ನು ತುಂಡು ತುಂಡಾಗಿ ಕೊಚ್ಚಿ ಚರಂಡಿಗೆಸೆದ ಪಾತಕಿಗಳು!