ಬೆಂಗಳೂರಿನ ಚಿತ್ರಮಂದಿರದ ಲೇಡಿಸ್ ಟಾಯ್ಲೆಟ್‌ನಲ್ಲಿ ಗುಪ್ತ ಕ್ಯಾಮರಾ; ಕಾಮುಕನಿಗೆ ಬಿತ್ತು ಧರ್ಮದೇಟು!

Published : Jan 05, 2026, 12:16 AM IST
Hidden Camera in Bengaluru Theatre Ladies Toilet Accused Caught

ಸಾರಾಂಶ

ಬೆಂಗಳೂರಿನ ಮಡಿವಾಳದಲ್ಲಿರುವ ಸಂಧ್ಯಾ ಥಿಯೇಟರ್‌ನ ಮಹಿಳಾ ಶೌಚಾಲಯದಲ್ಲಿ ವಿಕೃತಕಾಮಿಯೊಬ್ಬ ಗುಪ್ತ ಕ್ಯಾಮರಾ ಇಟ್ಟಿದ್ದ ಘಟನೆ ನಡೆದಿದೆ. 'ನುವ್ವು ನಾಕು ನಚ್ಚಾವ್' ಸಿನಿಮಾ ನೋಡಲು ಬಂದಿದ್ದ ಮಹಿಳೆಯರು ಇದನ್ನು ಪತ್ತೆಹಚ್ಚಿ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರು (ಜ.5): ಸಿಲಿಕಾನ್ ಸಿಟಿಯ ಸಿನಿಮಾ ಥಿಯೇಟರ್‌ವೊಂದರಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ತಂದಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವಾಶ್ ರೂಮ್‌ಗೆ ಹೋದ ಮಹಿಳೆಯರು ಅಲ್ಲಿ ಅಡಗಿಸಿಟ್ಟಿದ್ದ ಕ್ಯಾಮರಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಸಂಧ್ಯಾ ಥಿಯೇಟರ್‌ನಲ್ಲಿ ಯುವತಿಯರಿಗೆ ಕಾದಿತ್ತು ಶಾಕ್

ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದೆ. ವಿಕೃತಕಾಮಿಯೊಬ್ಬ ಲೇಡಿಸ್ ಟಾಯ್ಲೆಟ್ ಒಳಗೆ ಗುಪ್ತವಾಗಿ ಕ್ಯಾಮರಾ ಅಳವಡಿಸಿದ್ದನು. ವಾಶ್ ರೂಮ್‌ಗೆ ಹೋದ ಮಹಿಳೆಯರು ಮತ್ತು ಯುವತಿಯರು ಇದನ್ನು ಗಮನಿಸಿ ತಕ್ಷಣವೇ ಹೊರಬಂದು ಕಿರುಚಾಡಿದ್ದಾರೆ. ಇದರಿಂದ ಥಿಯೇಟರ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

'ನುವ್ವು ನಾಕು ನಚ್ಚಾವ್' ಸಿನಿಮಾ ನೋಡಲು ಬಂದಾಗ ಕೃತ್ಯ

ತೆಲುಗಿನ ಜನಪ್ರಿಯ ಸಿನಿಮಾ 'ನುವ್ವು ನಾಕು ನಚ್ಚಾವ್' (Nuvvu Naaku Nachav) ಇತ್ತೀಚೆಗೆ ರೀ-ರಿಲೀಸ್ ಆಗಿತ್ತು. ಈ ಸಿನಿಮಾ ನೋಡಲು ಮಹಿಳೆಯರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸಿನಿಮಾ ವೀಕ್ಷಣೆಯ ವಿರಾಮದ ಸಮಯದಲ್ಲಿ ಮಹಿಳೆಯರು ಶೌಚಾಲಯಕ್ಕೆ ಹೋದಾಗ ಈ ನೀಚ ಕೃತ್ಯ ಬೆಳಕಿಗೆ ಬಂದಿದೆ.

ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು

ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಸ್ಥಳೀಯರು ತಕ್ಷಣವೇ ಪತ್ತೆ ಹಚ್ಚಿ ಹಿಡಿದಿದ್ದಾರೆ. ಅವನ ವಿಕೃತ ಬುದ್ಧಿಗೆ ಆಕ್ರೋಶಗೊಂಡ ಸಾರ್ವಜನಿಕರು ಸ್ಥಳದಲ್ಲೇ ಸರಿಯಾಗಿ ಧರ್ಮದೇಟು ನೀಡಿದ್ದಾರೆ. ಬಳಿಕ ಮಡಿವಾಳ ಪೊಲೀಸರಿಗೆ ಮಾಹಿತಿ ನೀಡಿ, ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಮಡಿವಾಳ ಪೊಲೀಸರಿಂದ ತೀವ್ರ ವಿಚಾರಣೆ

ಸ್ಥಳಕ್ಕೆ ಆಗಮಿಸಿದ ಮಡಿವಾಳ ಠಾಣೆಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆತ ಎಷ್ಟು ಸಮಯದಿಂದ ಈ ರೀತಿ ಮಾಡುತ್ತಿದ್ದ? ಅವನ ಬಳಿ ಬೇರೆ ಯಾವುದೇ ದೃಶ್ಯಗಳಿವೆಯೇ ಎಂಬ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ. ಸಿನಿಮಾ ಮಂದಿರಗಳಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಈಗ ದೊಡ್ಡ ಮಟ್ಟದ ಪ್ರಶ್ನೆ ಎದ್ದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಳ್ಳಾರಿ ಗನ್‌ಮ್ಯಾನ್‌ ಸೇರಿ ಕೈ, ಬಿಜೆಪಿಯ 26 ಜನ ಸೆರೆ
ಯಲ್ಲಾಪುರದ ರಂಜಿತಾಳ ಸಹೋದರ ರಫೀಕ್‌ನ ಆಪ್ತ ಗೆಳೆಯ; ಬೆಚ್ಚಿಬೀಳಿಸುವ ಮಾಹಿತಿ ಬಿಚ್ಚಿಟ್ಟ ಕುಟುಂಬ