
ಪ್ರಯಾಗ್‌ರಾಜ್: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಅವರನ್ನು ಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ವಿಚಾರಣೆ ತನಕ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದಿದೆ. ಜೂ.21ರಂದು ಮಹಿಳೆಯೊಬ್ಬರು ದಯಾಳ್ ತಮ್ಮನ್ನು ವಿವಾಹವಾಗುವುದಾಗಿ ನಂಬಿಸಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸೆಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.
ಈ ಸಂಬಂಧ ಜು.6ರಂದು ಎಫ್‌ಐಆರ್ ದಾಖಲಾಗಿತ್ತು. ‘ಒಬ್ಬ ವ್ಯಕ್ತಿಯನ್ನು 1 ದಿನ, 2 ದಿನ ಅಥವಾ 3 ದಿನ ಮೋಸ ಮಾಡಬಹುದು. ಆದರೆ ದೂರುದಾರೆಯು ಕ್ರಿಕೆಟಿಗನ ಜೊತೆ 5 ವರ್ಷದಿಂದ ಸಂಬಂಧವಿಟ್ಟುಕೊಂಡಿದ್ದಾಗಿ ಹೇಳಿದ್ದಾರೆ. ಒಬ್ಬ ವ್ಯಕ್ತಿ 5 ವರ್ಷ ಮೋಸ ಹೋಗಲು ಹೇಗೆ ಸಾಧ್ಯ’ ಎಂದು ವಿಚಾರಣೆ ವೇಳೆ ನ್ಯಾಯಪೀಠ ಅಭಿಪ್ರಾಯಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ