ಹಿಂದೂ ಕಾರ್ಯಕರ್ತನ ಹತ್ಯೆ, ಕಲ್ಲು ತೂರಾಟ, ಮತ್ತೆ ಶಿವಮೊಗ್ಗದಲ್ಲಿ ಹಿಂಸಾಚಾರ, ಶಾಲಾ-ಕಾಲೇಜುಗಳಿಗೆ ರಜೆ

By Suvarna NewsFirst Published Feb 21, 2022, 12:26 PM IST
Highlights

* ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕಣ
* ಶಿವಮೊಗ್ಗದಲ್ಲಿ ಮತ್ತೆ ಹಿಂಸಾಚಾರ
* ಸಿಕ್ಕ-ಸಿಕ್ಕ ಕಡೆಗಳಲ್ಲಿ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಬೆಂಗಳೂರು(ಫೆ.21): ಮೊದಲೇ ಹಿಜಾಬ್ ವಿವಾದದ (Hijab Row) ನಡುವೆ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ. 

ಹಿಜಾಬ್ ವಿವಾದದಿಂದ ಸುದ್ದಿಯಾಗಿದ್ದ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿಯೇ ಘಟನೆ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. 

Latest Videos

Shivamogga: ಹಿಂದೂಪರ ಕಾರ್ಯಕರ್ತನ ಭೀಕರ ಹತ್ಯೆ, ಪರಿಸ್ಥಿತಿ ಉದ್ನಿಗ್ನ, 144 ಸೆಕ್ಷನ್‌ ಜಾರಿ

 ಭಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಹಿನ್ನೆಲೆಯಲ್ಲಿ  ಮಲೆನಾಡು ಬೆಚ್ಚಿಬಿದ್ದಿದ್ದು,  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಮೇರವಣಿಗೆ ವೇಳೆ ಕಲ್ಲು ತೂರಾಟ‌
ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಗೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಸದ್ಯ ಬಿಗುವಿನ ವಾತಾವರಣವಿದೆ. ಹರ್ಷಾ ಮೃತ ದೇಹವನ್ನು ಮೆಗ್ಗಾನ್ ಆಸ್ಪತ್ರೆಯಿಂದ ಮನೆಗೆ ಮೆರಣಿಗೆ ಮೂಲಕ ರವಾನೆ ಮಾಡುತ್ತಿದೆ. ವೇಳೆ ಎನ್‌ಟಿ ರಸ್ತೆಯಲ್ಲಿ ಕಲ್ಲು ತೂರಾಟ ನಡೆದಿದೆ. ಸಿಕ್ಕ-ಸಿಕ್ಕ ಕಡೆ ಕಲ್ಲು ತೂರಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಲ್ಲದೇ ಕೆಲವೆಡೆ ನಿಂತ ವಾಹನಗಳಿಗೆ ಕಿಡಿಗೇಡಿಗಳ ಬೆಂಕಿ ಹಚ್ಚುತ್ತಿದ್ದಾರೆ. 

 ಹಾಗೇ ಸೀಗೆಹಟ್ಟಿ‌ ಭಾಗದಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್​ಪಿ ಲಕ್ಷ್ಮಿಪ್ರಸಾದ್ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿ‌ನ ಪೊಲೀಸ್ ಸಿಬ್ಬಂದಿ ಕರೆಯಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
 ಭಜರಂಗದಳದ ಕಾರ್ಯಕರ್ತನ ಕೊಲೆ ಸುದ್ದಿ ಮಲೆನಾಡಿನಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳಕ್ಕೆ ಎಸ್​ಪಿ ಲಕ್ಷ್ಮಿಪ್ರಸಾದ್ ಮತ್ತು ಡಿಸಿ ಡಾ. ಸೆಲ್ವಮಣಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಪ್ರಕರಣ
ಹಿಂದೂಪರ ಕಾರ್ಯಕರ್ತ (Hindu Activits) ಹರ್ಷ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ಕಡೆ ಕಲ್ಲುತೂರಾಟ ನಡೆದ ಘಟನೆಯೂ ವರದಿಯಾಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಈಗಾಗಲೇ ಜಾರಿಯಲ್ಲಿದ್ದ 144 ಸೆಕ್ಷನ್‌ ಅನ್ನು ಮತ್ತೆರಡು ದಿನ ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ  ಮೆಗ್ಗಾನ್‌ ಆಸ್ಪತ್ರೆ ಎದುರು ನೂರಾರು ಮಂದಿ ಜಮಾಯಿಸಿದ್ದು, ಈ ವೇಳೆ ಕೆಲವರು ಆಸ್ಪತ್ರೆಯ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಆಸ್ಪತ್ರೆ ಗಾಜುಗಳಿಗೆ ಹಾನಿಯಾಗಿದೆ.

ಕಲ್ಲುತೂರಾಟ-ಘಟನೆ ಬೆನ್ನಲ್ಲೇ ನಗರದ ರವಿವರ್ಮ ಬೀದಿ ಮತ್ತು ಆಜಾದ್‌ ನಗರದಲ್ಲಿ ಕಲ್ಲುತೂರಾಟದ ಘಟನೆ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ಈ ಮಧ್ಯೆ, ನಗರದ ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

click me!