ಒಂದೆಡೆ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದ್ರೆ, ಮತ್ತೊಂಡೆದೆ ಶಿವಮೊಗ್ಗದಲ್ಲಿ ಫೋಟೋ ವಿಚಾರಕ್ಕೆ ದೊಡ್ಡ ಮಟ್ಟದ ಗಲಾಟೆಯಾಗಿದ್ದು, ಕ್ಷಣ ಕ್ಷಣಕ್ಕೂ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದೆ.
ಶಿವಮೊಗ್ಗ, (ಆ.15): ಶಿಮವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಹಾಗೂ ವೀರ ಸಾವರ್ಕರ್ ಪೋಟೋ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇದರ ಮಧ್ಯೆಯೇ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ.
ಬಜಾರ್ ನಲ್ಲಿದ್ದ ಪ್ರೇಮ್ ಸಿಂಗ್ ಎಂಬ 20 ವರ್ಷದ ಯುವಕನಿಗೆ ಬಜಾರ್ ನಿಂದ ಇರಿಯಲಾಗಿದ್ದು, ಆತನನ್ನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೀರ ಸಾವರ್ಕರ್ ಹಾಗೂ ಟಿಪ್ಪು ಫ್ಲೆಕ್ಸ್ ವಿಚಾರದಲ್ಲಿ 10 ಜನರನ್ನ ವಶಕ್ಕೆ ಪಡೆಯಲಾಗಿದೆ. ಗಲಾಟೆ ಹಿನ್ನೆಲೆಯಲ್ಲಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಗಿಳಿದಿವೆ. ಈ ವೇಳೆ ಪೊಲೀಸರೊಡನೆ ವಾಗ್ವಾದ ನಡೆಸಿದ್ದಾರೆ.
undefined
ಶಿವಮೊಗ್ಗದಲ್ಲಿ ಮತ್ತೆ ಫೋಟೋ ಗಲಾಟೆ, ಲಾಠಿ ಚಾರ್ಜ್, 144 ಸೆಕ್ಷನ್ ಜಾರಿ
ಉಪ್ಪಾರಕೇರಿ ಬಡಾವಣೆಯಲ್ಲಿ ಪ್ರೇಮ್ ಸಿಂಗ್ ಎಂಬುವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ರೆ, ಮತ್ತೊಂದೆಡೆ ಗಾಂಧಿ ಬಜಾರ್‌ನಲ್ಲಿ ಅಂಗಡಿ ಬಾಗಿಲು ಮುಚ್ಚಿ ಮನೆಗೆ ತೆರಳುತ್ತಿದ್ದಾಗ ಪ್ರವೀಣ್ ಎನ್ನುವಾತನಿಗೆ ದುಷ್ಕರ್ಮಿಗಳು ಏಕಾಏಕಿ ಚೂರಿ ಇರಿದಿದ್ದಾರೆ. ಇಬ್ಬರು ಗಾಯಾಳಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಘೋಷಿತ ಬಂದ್
ಒಂದೆಡೆ ಟಿಪ್ಪು ಹಾಗೂ ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದ್ರೆ, ಮತ್ತೊಂದೆಡೆ ಯುವಕನೋರವನಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಕ್ಷಣ- ಕ್ಷಣಕ್ಕೂ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಅಲ್ಲದೇ ಪರಿಸ್ಥಿತಿ ನಿಯಂತ್ರಣಕ್ಕೆ ಟಿಯರ್ ಗ್ಯಾಸ್ ಸಿಡಿಸಿದ್ದಾರೆ. ಇದರಿಂದ ಶಿವಮೊಗ್ಗ ಅಘೋಷಿತ ಬಂದ್ ಆಗಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನ ಮುಚ್ಚುತ್ತಿದ್ದಾರೆ.